ರಾಮಜನ್ಮಭೂಮಿ ವಿವಾದ : ಮುಂದಿನ ವರ್ಷ ಫೆ. 8ಕ್ಕೆ ವಿಚಾರಣೆ ಮುಂದೂಡಿಕೆ

ದೆಹಲಿ : ಅನೇಕ ವರ್ಷಗಳಿಂದ ಕೋಮು ಸೌಹಾರ್ದಕ್ಕೆ ಅಡ್ಡಿಯಾಗಿರುವ ಅಯೋಧ್ಯೆ ರಾಮಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ಪ್ರಕರಣಗಳ ಅಂತಿಮ ಹಂತದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇಂದಿನಿಂದ ಪ್ರಾರಂಭವಾಗಿದ್ದು, ಬಳಿಕ ಮುಂದಿನ ವರ್ಷ ಫೆಬ್ರವರಿ 8ಕ್ಕೆ ವಿಚಾರಣೆಯನ್ನು ಮುಂದೂಡಿದೆೋ.
ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ,. ಅಶೋಕ್‌ ಭೂಷಣ್ ಹಾಗೂ ಅಬ್ದುಲ್‌ ನಜೀರ್ ಅವರ ತ್ರಿಸದಸ್ಯ ಪೀಠ ವಿಚಾರಣೆ ಆರಂಭಿಸಿ ಬಳಿಕ ಮುಂದೂಡಿದ್ದಾರೆ.

ಅಯೋಧ್ಯೆಯಲ್ಲಿ 2.77ಎಕರೆ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್‌ ಮಂಡಳಿ, ನಿರ್ಮೋಹಿ ಅಕರ ಮತ್ತು ರಾಮ್‌ ಲಲ್ಲಾ ಮಧ್ಯೆ ಭಾಗ ಮಾಡುವಂತೆ 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ 13 ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಈ ಕುರಿತ ವಿಚಾರಣೆ ಇಂದಿನಿಂದ ನಡೆಯಲಿದೆ.
ಉತ್ತರ ಪ್ರದೇಶದ ಶಿಯಾ ಮಂಡಳಿಯ ಕೆಲ ಯುವಕರು ಅಯೋಧ್ಯೆಯ ರಾಮಮಂದಿರ ಜಾಗದಿಂದ ಸ್ಪಲ್ಪ ದೂರದಲ್ಲಿ ಮಸೀದಿ ನಿರ್ಮಿಸಲು ಅವಕಾಶ ನೀಡುವಂತೆ ಕೋರಿ ಅಲಹಾಬಾದ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದು, ಇದಕ್ಕೆ ಸುನ್ನಿ ವಕ್ಫ್‌ ಮಂಡಳಿ ವಿರೋಧ ವ್ಯಕ್ತಪಡಿಸಿತ್ತು.

Leave a Reply

Your email address will not be published.

Social Media Auto Publish Powered By : XYZScripts.com