ಸಂಕಲ್ಪ ಪತ್ರ-2017 : ಗುಜರಾತ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಸಿದ್ಧ
ಅಹಮದಾಬಾದ್ : ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲ ಬಿಜೆಪಿ ಶುಕ್ರವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಅಹಮದಾಬಾದ್ನಲ್ಲಿಂದು ಕಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸಂಕಲ್ಪ ಪತ್ರ-2017 ಎಂಬ ಶೀರ್ಷಿಕೆ ಇರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅರುಣ್ ಜೇಟ್ಲಿ, ಕಾಂಗ್ರೆಸ್, ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಸುಳ್ಳು ಭರವಸೆ ನೀಡಿದೆ ಎಂದು ಟೀಕಿಸಿದ್ದಾರೆ.
ಗುಜರಾತ್ ಆರ್ಥಿಕ ಬೆಳವಣಿಗೆ ದರವು ದೇಶದಲ್ಲೇ ಗರಿಷ್ಠವಾಗಿದೆ. ಕಳೆದ ಐದು ವರ್ಷಗಳಲ್ಲಿ ರಾಜ್ಯ ಶೇ.10ರಷ್ಟು ಪ್ರಗತಿ ಹೊಂದಿದೆ ಎಂದಿದ್ದಾರೆ.
ಡಿಸೆಂಬರ್4ರಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರೈತರಿಗೆ ಅನುಕೂಲವಾಗುವ ರೀತಿ ಭರವಸೆಗಳನ್ನು ನೀಡಿತ್ತು.