ಪತ್ರಕರ್ತ ರವಿ ಬೆಳಗೆರೆ Arrest : ಶಾರ್ಪ್‌ ಶೂಟರ್‌ ಬಿಚ್ಚಿಟ್ಟ ಭಯಾನಕ ಸತ್ಯ..!!!!

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ತನಿಖೆ ನಡೆಸುವ ವೇಳೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪತ್ರಕರ್ತರೊಬ್ಬರ ಹತ್ಯೆಗೆ ಸುಪಾರಿ ನೀಡಿದ ಆರೋಪದಡಿ ಹಾಯ್‌ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆಯವರನ್ನು ಬಂಧಿಸಲಾಗಿದೆ.

ಗೌರಿ ಲಂಕೇಶ್ ಹತ್ಯೆ ಸಂಬಂಧ ತನಿಖೆ ನಡೆಸುವ ವೇಳೆ ಎಸ್‌ಐಟಿ ತಂಡ ಸುಪಾರಿ ಕಿಲ್ಲರ್‌, ಶಾರ್ಪ್‌ ಶೂಟರ್‌ ಶಶಿ ಮುಂಡೇವಾಡಗಿ ಅವರನ್ನು ಬಂಧಿಸಲಾಗಿತ್ತು. ಆತನ ವಿಚಾರಣೆ ನಡೆಸುವ ವೇಳೆ ರವಿ ಬೆಳಗೆರೆ ಪತ್ರಕರ್ತರೊಬ್ಬರ ಹತ್ಯೆಗೆ ಸುಪಾರಿ ನೀಡಿರುವುದಾಗಿ ಬಾಯಿ ಬಿಟ್ಟಿದ್ದಾನೆ.

ರವಿ ಬೆಳಗೆರೆ ಅವರ ಎರಡನೇ ಪತ್ನಿ ಜೊತೆ ವರದಿಗಾರ ಸುನಿಲ್‌ ಹೆಗ್ಗರವಳ್ಳಿ ಅಕ್ರಮ ಸಂಬಂಧ ಹೊಂದಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸುನಿಲ್‌ ಹತ್ಯೆ ಮಾಡಲು ಶಾರ್ಪ್‌ ಶೂಟರ್‌ ಶಶಿ ಮುಂಡೇವಾಡಗಿಗೆ 30 ಲಕ್ಷ ರೂ ಸುಪಾರಿ ಕೊಟ್ಟಿದ್ದರು ಎಂದು ತಿಳಿದುಬಂದಿದೆ.

ಮತ್ತಷ್ಟು ಮಾಹಿತಿಗಾಗಿ ಪೊಲೀಸರು ಶಶಿಯ ತೀವ್ರ ವಿಚಾರಣೆ ನಡೆಸುತ್ತಿದ್ದು, ಆತನಿಂದ ರಿವಾಲ್ವರ್‌ ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಈ ಪ್ರಕರಣದ ಹಿಂದೆ ಪ್ರಭಾವಿಗಳ ಕೈವಾಡವಿರುವುದಾಗಿ ಬಾಯಿಬಿಟ್ಟಿದ್ದಾನೆ.

 

Leave a Reply

Your email address will not be published.

Social Media Auto Publish Powered By : XYZScripts.com