ರವಿ ಬೆಳಗೆರೆ ವಿರುದ್ದ FIR ದಾಖಲು : ಇಂದೇ ನ್ಯಾಯಾಲಯಕ್ಕೆ ಹಾಜರು

ಬೆಂಗಳೂರು : ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣ ಸಂಬಂಧ ಪತ್ರಕರ್ತ ರವಿ ಬೆಳಗೆರೆ ಅವರ ವಿರುದ್ದ ಐಪಿಸಿ ಸೆಕ್ಷನ್‌ 307 ಹಾೂ 120 ಬಿ, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ  325 ಅಡಿ ಪ್ರಕರಣ ದಾಖಲಾಗಿದೆ. ಕೆಲವೇ ಹೊತ್ತಿನಲ್ಲಿ ರವಿ ಬೆಳಗೆರೆಯವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವುದಾಗಿ ಮೂಲಗಳು ತಿಳಿಸಿವೆ.

ಮತ್ತೊಂದೆಡೆ ರವಿ ಬೆಳಗೆರೆ ಅವರ ಮನೆಯಲ್ಲಿ ಸಿಸಿಬಿ ಪೊಲೀಸರು ತಪಾಸಣೆ ನಡೆಸುತ್ತಿದ್ದು, ಈ ವೇಳೆ ರಿವಾಲ್ವರ್‌, ಜಿಂಕೆ ಚರ್ಮ ಹಾಗೂ ಆಮೆ ಚಿಪ್ಪು ಪತ್ತೆಯಾಗಿರುವುದಾಗಿ  ತಿಳಿದುಬಂದಿದೆ.

ಗೌರಿ ಲಂಕೇಶ್ ಹತ್ಯೆ ಸಂಬಂಧ ತನಿಖೆ ನಡೆಸುವ ವೇಳೆ ಎಸ್‌ಐಟಿ ತಂಡ ಸುಪಾರಿ ಕಿಲ್ಲರ್‌, ಶಾರ್ಪ್‌ ಶೂಟರ್‌ ಶಶಿ ಮುಂಡೇವಾಡಗಿ ಅವರನ್ನು ಬಂಧಿಸಲಾಗಿತ್ತು. ಆತನ ವಿಚಾರಣೆ ನಡೆಸುವ ವೇಳೆ ರವಿ ಬೆಳಗೆರೆ ಪತ್ರಕರ್ತರೊಬ್ಬರ ಹತ್ಯೆಗೆ ಸುಪಾರಿ ನೀಡಿರುವುದಾಗಿ ಬಾಯಿ ಬಿಟ್ಟಿದ್ದಾನೆ.

ರವಿ ಬೆಳಗೆರೆ ಅವರ ಎರಡನೇ ಪತ್ನಿ ಜೊತೆ ವರದಿಗಾರ ಸುನಿಲ್‌ ಹೆಗ್ಗರವಳ್ಳಿ ಅಕ್ರಮ ಸಂಬಂಧ ಹೊಂದಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸುನಿಲ್‌ ಹತ್ಯೆ ಮಾಡಲು ಶಾರ್ಪ್‌ ಶೂಟರ್‌ ಶಶಿ ಮುಂಡೇವಾಡಗಿಗೆ 30 ಲಕ್ಷ ರೂ ಸುಪಾರಿ ಕೊಟ್ಟಿದ್ದರು ಎಂದು ತಿಳಿದುಬಂದಿದೆ.

ಮತ್ತಷ್ಟು ಮಾಹಿತಿಗಾಗಿ ಪೊಲೀಸರು ಶಶಿಯ ತೀವ್ರ ವಿಚಾರಣೆ ನಡೆಸುತ್ತಿದ್ದು, ಆತನಿಂದ ರಿವಾಲ್ವರ್‌ ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಈ ಪ್ರಕರಣದ ಹಿಂದೆ ಪ್ರಭಾವಿಗಳ ಕೈವಾಡವಿರುವುದಾಗಿ ಬಾಯಿಬಿಟ್ಟಿದ್ದಾನೆ.

 

Leave a Reply

Your email address will not be published.

Social Media Auto Publish Powered By : XYZScripts.com