ಯೋಗಿ Effect : ರಾಜ್ಯದಲ್ಲಿ ಚುನಾವಣಾ ಕಣಕ್ಕಿಳಿಯಲು ಸಜ್ಜಾದ ಸ್ವಾಮೀಜಿಗಳು

ಬೆಂಗಳೂರು : ಕರ್ನಾಟಕದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಬಾರಿ ಕರ್ನಾಟಕದಲ್ಲೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರ ಹೆಸರು ಭಾರೀ ಸುದ್ದಿ ಮಾಡುತ್ತಿದ್ದು, ಎಲ್ಲ ಕೇಸರಿಮಯವಾಗುವ ಲಕ್ಷಣಗಳು ಗೋಚರವಾಗುತ್ತಿವೆ.

ಹೌದು ಕರ್ನಾಟಕದ ಅನೇಕ ಮಂದಿ ಸ್ವಾಮೀಜಿಗಳು ಉತ್ತರ ಪ್ರದೇಶ ಸಿಎಂ, ಯೋಗಿ ಆದಿತ್ಯನಾಥ್‌ ಅವರಿಂದ ಸ್ಪೂರ್ತಿ ಪಡೆದಿದ್ದು, ಈ ಬಾರಿಯ ಚುನಾವಣೆಯಲ್ಲಿ ಅನೇಕ ಸ್ವಾಮೀಜಿಗಳು ಕಣಕ್ಕಿಳಿಯುವ ಸಾಧ್ಯತೆ ಇದೆ.ಅಲ್ಲದೆ ಈಗಾಗಲೆ ಅನೇಕ ಮಂದಿ ಸ್ವಾಮೀಜಿಗಳು ಚುನಾವಣಾ ಕಣಕ್ಕಿಳಿಯಲು ಸರ್ಕಸ್‌ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ. ಧಾರವಾಡದ ಮಾನಗುಂಡಿಯ ಬಸವಾನಂದ ಸ್ವಾಮೀಜಿ, ಚಿತ್ರದುರ್ಗದ ಶರಣ ಮಾದಾರ ಗುರು ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಈ ಸಾಲಿನಲ್ಲಿದ್ದಾರೆ.

ಬಿಜೆಪಿಯಿಂದ ಸ್ವಾಮೀಜಿಗಳು ಸ್ಪರ್ಧಿಸಲು ಸಿದ್ದತೆ ನೆಸಿದ್ದು, ಈಗಾಗಲೆ ಬಿಜೆಪಿ ನಾಯಕರು ಸ್ವಾಮೀಜಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಖಾಸಗಿ ಮಾಧ್ಯಮವೊಂದರ ಜೊತೆ ಮಾತನಾಡಿರುವ ಬಸವಾನಂದ ಸ್ವಾಮೀಜಿ, ರಾಜಕಾರಣಿಗಳು ಒಳಿತು ಮಾಡುತ್ತಿಲ್ಲ. ನಾಗರಿಕರ ಶ್ರೇಯಸ್ಸಿಗೆ ಪ್ರಯತ್ನಿಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ರಾಜಕೀಯಕ್ಕೆ ಧುಮುಕುವುದು ಅನಿವಾರ್ಯ. ರಾಜಕೀಯವನ್ನು ಸ್ವಚ್ಛ ಮಾಡುವುದೇ ನನ್ನ ಗುರಿ ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com