ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ಸಿಕ್ಕ ಜನಸ್ಪಂದನೆ ಅದ್ಭುತ ; B.S ಯಡಿಯೂರಪ್ಪ

ಬೀದರ್‌ : ನವ ಕರ್ನಾಟಕ ಪರಿವರ್ತನಾ ಯಾತ್ರೆ 11ನೇ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಉತ್ತಮ ಜನಸ್ಪಂದನೆ ಸಿಗುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಜನ ಪರಿವರ್ತನೆಯನ್ನು ನಿರೀಕ್ಷೆ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಪರಮೇಶ್ವರ್‌ ಅವರು ಕರ್ನಾಟಕ ಸುರಕ್ಷಿತ ರಾಜ್ಯ ಎನ್ನುತ್ತಾರೆ. ಆದರೆ ನಾನು ಹೇಳುತ್ತಿರುವುದು ಬೆಂಗಳೂರು ಅತ್ಯಾಚಾರ ಪ್ರಕರಣದಲ್ಲಿ 2ನೇ ಸ್ಥಾನದಲ್ಲಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಪರಮೇಶ್ವರ್‌ ಸರಿಯಾದ ಉತ್ತರ ನೀಡುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ 49 ಪ್ರಕರಣಗಳು ದಾಖಲಾಗಿವೆ. ಇದು ಮುಂಬೈನಲ್ಲಿ ನಡೆದ ಅಪರಾಧ ಪ್ರಕರಣಗಳಿಗಿಂತ ಹೆಚ್ಚು. ಎಲ್ಲಾ ಅಪರಾಧಗಳನ್ನು ಮುಚ್ಚಿಹಾಕಲು ಕೆಂಪಯ್ಯರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com