ರಾಜ್ಯದ ಜನರಿಗೆ ಕರೆಂಟ್‌ ಶಾಕ್ : ವಿದ್ಯುತ್‌ ದರ ಏರಿಕೆಗೆ ಸರ್ಕಾರದ ಚಿಂತನೆ

ಬೆಂಗಳೂರು : ರಾಜ್ಯವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಾಗ ರಾಜ್ಯದ ಜನರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ವಿದ್ಯುತ್‌ ದರ ಏರಿಕೆ  ಮಾಡುವ ಕುರಿತು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (kerc)ಗೆ ವಿದ್ಯುತ್‌ ಸರಬರಾಜು ಕಂಪನಿ ಮನವಿ ಮಾಡಿರುವುದಾಗಿ ತಿಳಿದುಬಂದಿದೆ.

ಈಗಾಗಲೆ ಐದು ಕಂಪನಿಗಳು ಪ್ರತೀ ಯುನಿಟ್‌ಗೆ 1 ರೂ ಹೆಚ್ಚಳ ಮಾಡವಂತೆ ಮನವಿ ಸಲ್ಲಿಸಿದ್ದು, ಅದರಲ್ಲೂ ಗುಲ್ಬರ್ಗ ವಿದ್ಯುತ್‌ ಸರಬರಾಜು ಕಂಪನಿ 1.46 ಪೈಸ ಹೆಚ್ಚಳಕ್ಕೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ.

ಕೆಇಆರ್‌ಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದು, ಇದಾದ ಬಳಿಕ ದರ ಏರಿಕೆಯಾಗಲಿದೆ. ಆದರೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದರ ಏರಿಕೆ ಸರ್ಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ವಿದ್ಯುತ್‌ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ಈ ಹಿಂದೆ ಹೇಳಿಕೆ ನೀಡಿದ್ದನ್ನು ಗಮನಿಸಬಹುದು.

 

Leave a Reply

Your email address will not be published.

Social Media Auto Publish Powered By : XYZScripts.com