ರವಿ ಬೆಳಗೆರೆ ಬಂಧನ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ : ಸಿದ್ದರಾಮಯ್ಯ

ತುಮಕೂರು : ರವಿ ಬೆಳಗರೆ ಬಂಧನ ವಿಚಾರದಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತುಮಕೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಮಧುಗಿರಿ ತಾಲೂಕು ಕಾಂಗ್ರೆಸ್ ವತಿಯಿಂದ ಮಧುಗಿರಿಯ ರಾಜೀವ್‍ಗಾಂಧೀ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದರು.

‘ ರವಿಬೆಳಗರೆ ಬಂಧನ ವಿಚಾರದಲ್ಲಿ ಕಾಂಗ್ರೆಸ್ ಹಸ್ತಕ್ಷೇಪವಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಅವರಿಗೆ ಮಾಡೋಕೆ ಬೇರೆ ಕಸುಬಿಲ್ಲ ಎಂದು ಟಾಂಗ್ ನೀಡಿದ್ದಾರೆ. ಜನವರಿ ಅಥವಾ ಫೆಬ್ರವರಿ ವೇಳೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದೇವೆ. ಪರಮೇಶ್ವರ್ ಪಕ್ಷದಿಂದ ಪ್ರಚಾರ ಮಾಡ್ತಿದ್ದಾರೆ. ನಾನು ಸರ್ಕಾರದ ವತಿಯಿಂದ ಪ್ರಚಾರ ಮಾಡುತ್ತಿದ್ದೇನೆ. ಪರಮೇಶ್ವರ್ ಕ್ಷೇತ್ರ ಕೊರಟಗೆರೆಯಲ್ಲೂ ಬಂದೂ ಪ್ರಚಾರ ಮಾಡ್ತೇನೆ ಎಂದಿದ್ದಾರೆ. ಇನ್ನು ಯಡಿಯೂರಪ್ಪನವರ ಪರಿವರ್ತನಾ ಯಾತ್ರೆ ಅಟ್ಟರ್ ಫೇಲ್ಯೂರ್ ಆಗಿದೆ ‘ ಎಂದು ಸಿಎಂ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com