ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ರಾಹುಲ್‌ ಗಾಂಧಿ ಆಯ್ಕೆ : ಸದ್ಯದಲ್ಲೇ ಪಟ್ಟಾಭಿಷೇಕ

ದೆಹಲಿ: ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಗಾದಿ ಮತ್ತೆ ಗಾಂಧಿ ಕುಟುಂಬಕ್ಕೇ ಸಿಕ್ಕಿದೆ. ಎಐಸಿಸಿ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರ ಅಧಿಕಾರಾವಧಿ ಮುಗಿದಿದ್ದು, ತಮ್ಮ ಸ್ಥಾನವನ್ನು ಪುತ್ರ ರಾಹುಲ್ ಗಾಂಧಿಗೆ ವಹಿಸಿಕೊಡುವ ಸಂದರ್ಭ ಒದಗಿಬಂದಿದೆ. ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಸದ್ಯದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಅವಿರೋಧವಾಗಿ ರಾಹುಲ್‌ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್‌ ಚುನಾವಣಾ ಸಮಿತಿ ಅಧಿಕೃತವಾಗಿ ತಿಳಿಸಿದೆ.ಅಲ್ಲದೆ ಮುಂದಿನ ದಿನಗಳಲ್ಲಿ ಈ ಕುರಿತ ಪ್ರಮಾಣ ಪತ್ರವನ್ನು ರಾಹುಲ್‌ಗೆ ನೀಡಲಾಗುವುದು ಎಂದು ಹೇಳಲಾಗಿದೆ.

ರಾಹುಲ್‌ಗಾಂಧಿ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ದೆಹಲಿಯಲ್ಲಿರುವ ಕಾಂಗ್ರೆಸ್‌ ಕಚೇರಿ ಮುಂದೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ರಾಹುಲ್‌ ಅಭಿಮಾನಿಗಳು ಎಲ್ಲೆಡೆ ಸಿಹಿ ಹಂಚಿ, ಪಟಾಕಿ ಹಚ್ಚಿ ಸಂಭ್ರಮಿಸಿದ್ದಾರೆ.

ಸದ್ಯದಲ್ಲೇ ರಾಹುಲ್‌ ಗಾಂಧಿಯವರ ಪಟ್ಟಾಭಿಶೇಕ ನಡೆಸುವುದಾಗಿ ಮೂಲಗಳು ತಿಳಿಸಿವೆ.
 

 

 

Leave a Reply

Your email address will not be published.