ಚುನಾವಣೆಯಲ್ಲಿ ಪಾಕ್‌ ಹಸ್ತಕ್ಷೇಪ : ಮೋದಿ ವಿರುದ್ಧ ಗುಡುಗಿದ ಮನಮೋಹನ್‌ ಸಿಂಗ್‌

ದೆಹಲಿ : ಗುಜರಾತ್‌ ಚುನಾವಣೆಯಲ್ಲಿ ಪಾಕಿಸ್ತಾನ ಹಸ್ತಕ್ಷೇಪ ಮಾಡುತ್ತಿದೆ ಎಂಬ ಪ್ರಧಾನಿ ಮೋದಿ ಅವರ ಹೇಳಿಕೆಗೆ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ತಿರುಗೇಟು ನೀಡಿದ್ದಾರೆ.

ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂಬ ಭಯವಿದೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಆಧಾರ ರಹಿತ ಆರೋಪ ಮಾಡಲಾಗುತ್ತಿದ ಮೋದಿ ವಿರುದ್ಧ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ನ ಕೆಲ ಮುಖಂಡರು ಪಾಕಿಸ್ತಾನದ ಸಚಿವರನ್ನು ಭೇಟಿ ಮಾಡಿದ್ದರು. ಬಳಿಕ ಮಣಿಶಂಕರ್‌ ಅಯ್ಯರ್ ನನ್ನ ವಿರುದ್ಧ ನೀಚ್‌ ಆದ್ಮಿ ಎಂದಿದ್ದರು. ಮೂರು ಗಂಟೆಗಳ ಕಾಲ ಪಾಕ್  ರಾಯಭಾರಿ ಜೊತೆ ಕಾಂಗ್ರೆಸ್‌ನ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಸಹ ಭಾಗವಹಿಸಿದ್ದರು ಎಂದು ಭಾನುವಾರ ನಡೆದ ಚುನಾವಣಾ ರ್ಯಾಲಿಯಲ್ಲಿ ಮೋದಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಮನಮೋಹನ್‌ ಸಿಂಗ್‌, ಈ ರೀತಿಯ ಆರೋಪ ಮಾಡುವುದು ಸರಿಯಲ್ಲ. ಮೋದಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು. ಈ ರೀತಿಯ ಹೇಳಿಕೆ ನೀಡಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಬೇಡಿ. ನಿಮ್ಮ ಹೇಳಿಕೆಗೆ ಕ್ಷಮಾಪಣೆ ಕೇಳಿ ಎಂದು ಆಗ್ರಹಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com