ಬಾಹುಬಲಿ ಖ್ಯಾತಿಯ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೊಂದು Bad news….?

ಬಾಹುಬಲಿ ಖ್ಯಾತಿಯ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೊಂದು ಶಾಕಿಂಗ್ ನ್ಯೂಸ್ ಬಂದಿದೆ. ಅನುಷ್ಕಾ ಇನ್ನು ಕೆಲ ತಿಂಗಳು ಯಾವುದೇ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

 

ಹೌದು ಅನುಷ್ಕಾ ಶೆಟ್ಟಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಇದರಿಂದಾಗಿ ಕೆಲ ದಿನಗಳಿಂದ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲವಂತೆ. ಅಲ್ಲದೆ, ಅವರ ಭಾಗಮತಿ ಸಿನಿಮಾ ಪ್ರಚಾಕ್ಕೂ ತೆರಳಲು ಸಾಧ್ಯವಾಗದಷ್ಟು ನೋವು ಕಾಣಿಸಿಕೊಂಡಿದೆ ಎಂದು ಸುದ್ದಿ ಮೂಲಗಳು ಹೇಳಿವೆ.

ಸದ್ಯ ವಿಶ್ರಾಂತಿಯಲ್ಲಿರುವ ಅನುಷ್ಕಾ, ಕೇರಳ ಹಾಗೂ ಕೊಯಮತ್ತೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಅವರು ಸೈಜ್‌ ಝೀರೋ ಸಿನಿಮಾದಲ್ಲಿ ನಟಿಸಿದ್ದು, ಆ ಚಿತ್ರಕ್ಕಾಗಿ ತೂಕ ಹೆಚ್ಚಿಸಿಕೊಂಡಿದ್ದರು. ಆದ್ದರಿಂದ ಅವರಿಗೆ ಬೆನ್ನುನೋವಿನ ಸಮಸ್ಯೆ ಕಾಣಿಸಿಕೊಂಡಿರುವುದಾಗಿ ಹೇಳಲಾಗಿದೆ.

ಸದ್ಯ ಭಾಗಮತಿ ಚಿತ್ರದ ಶೂಟಿಂಗ್ ಮುಗಿದಿದ್ದು, ಬೆನ್ನು ನೋವು ಸಂಪೂರ್ಣ ಗುಣವಾದ ಬಳಿಕ ಪ್ರಚಾರ ಕಾರ್ಯಕ್ಕೆ ತೆರಳಲಿದ್ದಾರಂತೆ.

Leave a Reply

Your email address will not be published.

Social Media Auto Publish Powered By : XYZScripts.com