ವೋಟಿಗಾಗಿ ರಾಷ್ಟ್ರೀಯ ಪಕ್ಷಗಳು ಬೆಂಕಿ ಹಚ್ಚುವ ಕೆಲಸ ಮಾಡುತ್ತಿವೆ : HDK

ಬೆಂಗಳೂರು : ಚಿಕ್ಕ ಚಿಕ್ಕ ಗಲಾಟೆಗಳನ್ನು ದೊಡ್ಡದು ಮಾಡಿ ಅಮಾಯಕರನ್ನು ಬಲಿ ತೆಗೆದುಕೊಳ್ಳಲಾಗುತ್ತಿದೆ. ಇದೆಲ್ಲ  ಚುನಾವಣೆಯ ಗಿಮಿಕ್ ಅಷ್ಟೇ. ಚುನಾವಣೆಗಾಗಿ ರಾಷ್ಟ್ರೀಯ ಪಕ್ಷಗಳು ಹುನ್ನಾರ ಮಾಡುತ್ತಿರುವುದಾಗಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಪರೇಶ್‌ ಮೇಸ್ತ ಸಾವಿನ ಹಿನ್ನೆಲೆಯಲ್ಲಿ ಉತ್ತರ ಕನ್ನಡದಲ್ಲಿ ಗಲಭೆ ಉಂಟಾಗಿರುವುದರ ಕುರಿತು ಮಾತನಾಡಿದ ಎಚ್‌ಡಿಕೆ, ಸಿಎಂ ಆ ಜಿಲ್ಲೆಯಲ್ಲಿದ್ದಾಗಲೇ ಘಟನೆ ನಡೆದಿದೆ. ರಾಷ್ಟ್ರೀಯ ಪಕ್ಷಗಳು ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿವೆ. ಪರೇಶ್‌ ಯಾವ ಕಾರಣಕ್ಕೆ ಮೃತಪಟ್ಟಿದ್ದಾನೋ ಗೊತ್ತಿಲ್ಲ. ಆದರೆ ಆತನ ಹೆಸರಿನಲ್ಲಿ ಬೆಂಕಿ ಹಚ್ಚಲಾಗುತ್ತಿದೆ ಎಂದು ಎಚ್ಚರಿಸಿದ್ದಾರೆ.

ನಾನು ರಾಜ್ಯದ ಜನರಲ್ಲಿ ಬೇಡಿಕೊಳ್ಳುವುದಿಷ್ಟೇ. ವೋಟಿಗಾಗಿ ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಬೆಂಕಿ ಹಚ್ಚುವ ಕೆಲಸ ಮಾಡುತ್ತಿವೆ. ಇಂತಹ ಮೋಸಕ್ಕೆ ಬಲಿಯಾಗಬೇಡಿ. ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನು ಎತ್ತ ಕೊಂಡೊಯ್ಯುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com