2021 ರಲ್ಲಿ ಚಾಂಪಿಯನ್ಸ್ ಟ್ರೋಫಿ ಹಾಗೂ 2023 ವಿಶ್ವಕಪ್ ಆತಿಥ್ಯ ವಹಿಸಲಿದೆ ಭಾರತ..!

2021 ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಹಾಗೂ 2023 ರ ವಿಶ್ವಕಪ್ ಗೆ ಭಾರತ ಆತಿಥ್ಯ ವಹಿಸಲಿದೆ ಎಂದು ಸೋಮವಾರ ಬಿಸಿಸಿಐ ವಿಶೇಷ ಸಭೆಯಲ್ಲಿ ಹೇಳಿದೆ.

2023 ರಲ್ಲಿ ಮೊದಲ ಬಾರಿಗೆ ವಿಶ್ವಕಪ್ ಭಾರತ ಸ್ವಂತವಾಗಿ ಆತಿಥ್ಯ ವಹಿಸಲಿದೆ. 2011 ರಲ್ಲಿ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಜೊತೆ ಜಂಟಿಯಾಗಿ ಆತಿಥ್ಯ ವಹಿಸಿದ್ದ ಭಾರತ, 1996 ರಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾಗಳೊಂದಿಗೆ ಸೇರಿ ಟೂರ್ನಿ ನಡೆಸಿತ್ತು. 1987 ರಲ್ಲಿ ಪಾಕ್ ಹಾಗೂ ಭಾರತ ಒಟ್ಟಾಗಿ ವಿಶ್ವಕಪ್ ಗೆ ಆತಿಥ್ಯ ವಹಿಸಿದಿದ್ದವು. 2011 ರಲ್ಲಿ ಆತಿಥ್ಯ ವಹಿಸಿದ್ದಾಗ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ ಎರಡನೇ ಬಾರಿಗೆ ವಿಶ್ವಕಪ್ ಜಯಿಸಿತ್ತು.

2019-20 ರಲ್ಲಿ ಅಫಘಾನಿಸ್ತಾನದೊಂದಿಗೆ ಟೆಸ್ಟ್ ಪಂದ್ಯವನ್ನು ಆಡಲಿದೆ. 2019 ರಿಂದ 2023 ರವರೆಗೆ 5 ವರ್ಷಗಳ ಅವಧಿಯಲ್ಲಿ ಭಾರತ ಒಟ್ಟು 81 ಅಂತರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ.

Leave a Reply

Your email address will not be published.

Social Media Auto Publish Powered By : XYZScripts.com