ಅನಾರೋಗ್ಯ ಹಿನ್ನೆಲೆ : ರವಿ ಬೆಳಗೆರೆಗೆ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು : ಸಹೋದ್ಯೋಗಿ , ಪತ್ರಕರ್ತ ಸುನಿಲ್‌ಹೆಗ್ಗರವಳ್ಳಿ ಅವರ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆಯವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

ಸಿಟಿ ಸಿವಿಲ್‌ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದು, ಈ ವೇಳೆ ರವಿ ಬೆಳಗೆರೆ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಮಧ್ಯಂತರ ಜಾಮೀನು ನೀಡಿದೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ರವಿ ಬೆಳಗೆರೆಗೆ ಆದೇಶಿಸಿದ್ದು, 1 ಲಕ್ಷ ರೂ ಹಾಗೂ ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿದೆ.

ಮಂಗಳವಾರ ರವಿ ಬೆಳಗೆರೆ ಅವರಿಗೆ ಆರೋಗ್ಯ ಹದಗೆಟ್ಟಿದ್ದು, ಅವರನ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬುಧವಾರವೂ ಆರೋಗ್ಯ ಹದಗೆಟ್ಟ ಕಾರಣ ಜಾಮೀನು ನೀಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com