ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ACB ದಾಳಿ : ದಾಖಲೆ ಪರಿಶೀಲನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಜಾನೆಯೇ ಎಸಿಬಿ ಅಧಿಕಾರಿಳು ದಾಳಿ ನಡೆಸಿದ್ದಾರೆ. ಬಳ್ಳಾರಿ. ಧಾರವಾಡ, ತುಮಕೂರು, ಶಿವಮೊಗ್ಗದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಅನೇಕ ವರ್ಷಗಳಿಂದಲೂ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪ ಕೇಳಿಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿನ ಪ್ರದೇಶಾಭಿವೃದ್ಧಿ ನಿಗಮದ ಅಧಿಕಾರಿ ಷಕ್ಷಾವಲಿ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಧಾರವಾಡದ ಎಸಿಎಫ್‌ಪಾಂಡುರಂಗ ಪೈ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. ಕಲಬುರ್ಗಿಯ ಸಣ್ಣ ನೀರಾವರಿ ವಿಭಾಗದ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಮಲ್ಲಪ್ಪ , ಶಿವಮೊಗ್ಗ ಹಾಗೂ ಕೊರಟಗೆರೆಯಲ್ಲೂ ದಾಳಿ ನಡೆಸಲಾಗಿದೆ.

Leave a Reply

Your email address will not be published.