Cricket : ರೋ’ಹಿಟ್’ ಆಟಕ್ಕೆ ಸುಸ್ತಾದ ಲಂಕಾ : ಭಾರತಕ್ಕೆ 141 ರನ್ ಭರ್ಜರಿ ಗೆಲುವು

ಮೊಹಾಲಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 141 ರನ್ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ದುಕೊಂಡಿತು.  ಮೊದಲು ಬ್ಯಾಟಿಂಗ್ ನಡೆಸಿದ ಭಾರತ 4 ವಿಕೆಟ್ ಕಳೆದುಕೊಂಡು 392 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು.

ಮೋಹಕ ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ 3ನೇ ದ್ವಿಶತಕ ಬಾರಿಸಿದರು. 208 ರನ್ ಗಳಿಸಿದ ರೋಹಿತ್ 13 ಬೌಂಡರಿ ಹಾಗೂ 12 ಸಿಕ್ಸರ್ ಸಿಡಿಸಿದರು. ಮಿಂಚಿನ ಅರ್ಧಶತಕ ಬಾರಿಸಿದ ಶ್ರೇಯಸ್ ಅಯ್ಯರ್ 88 ರನ್ ಗಳಿಸಿ 9 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿದರು.

ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ಓವರುಗಳಲ್ಲಿ 8 ವಿಕೆಟ್ ಕಳೆದುಕೊಂಡು 251 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಲಂಕಾ ಪರವಾಗಿ ಏಂಜೆಲೋ ಮ್ಯಾಥ್ಯೂಸ್ ಅಜೇಯ 111 ರನ್ ಗಳಿಸಿದರು. ಭಾರತದ ಪರವಾಗಿ ಯಜುವೇಂದ್ರ ಸಿಂಗ್ ಚಹಲ್ 3, ಜಸ್ಪ್ರೀತ್ ಬುಮ್ರಾ 2 ಹಾಗೂ ಪಾದಾರ್ಪಣೆ ಪಂದ್ಯವನ್ನಾಡಿದ ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದರು.  ರೋಹಿತ್ ಶರ್ಮಾ ಪಂದ್ಯಶ್ರೇಷ್ಟ ಪ್ರಶಸ್ತಿಯನ್ನು ಪಡೆದರು.

 

Leave a Reply

Your email address will not be published.

Social Media Auto Publish Powered By : XYZScripts.com