ಪತ್ರಕರ್ತ ರವಿ ಬೆಳಗೆರೆಗೆ ಮತ್ತೊಂದು ಸಂಕಷ್ಟ : ಮತ್ತೆ Arrest Warrant ಜಾರಿ

ಬೆಂಗಳೂರು : ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಅವರ ಕೊಲೆಗೆ ಸುಪಾರಿ ನೀಡಿದ್ದ ಆರೋಪ ಎದುರಿಸುತ್ತಿರುವ ರವಿ ಬೆಳಗೆರೆಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮತ್ತೊಂದು ಬಂಧನದ ವಾರೆಂಟ್‌ ಜಾರಿಯಾಗಿದೆ.
ಬುಧವಾರವಷ್ಟೇ ರವಿ ಬೆಳಗೆರೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ  ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಮತ್ತೊಂದು ಅರೆಸ್ಟ್‌ ವಾರೆಂಟ್‌ ಜಾರಿ ಮಾಡಿದ್ದು, ತಕ್ಷಣವೇ ರವಿ ಬೆಳಗೆರೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಸುವಂತೆ ಆದೇಶಿಸಿದೆ.
ಏಳು ವರ್ಷಗಳ ಹಿಂದೆ ರವಿ ಬೆಳಗೆರೆ ಪತ್ರಿಕೆಯಲ್ಲಿ ಮಹಿಳೆಯೊಬ್ಬರ ಬಗ್ಗೆ ವರದಿಯೊಂದು ಪ್ರಕಟವಾಗಿತ್ತು. ಈ ವರದಿಯಿಂದಾಗಿ ತ್ಮ ಮಾನಹಾನಿಯಾಗಿದೆ ಎಂದು ಮಹಿಳೆ ಆರೋಪಿಸಿದ್ದು, ರವಿ ಬೆಳಗೆರೆ ವಿರುದ್ದ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ಅನೇಕ ಬಾರಿ ವಿಚಾರಣೆಗೆ ಹಾಜರಾಗುವಂತೆ ರವಿಗೆ ನೋಟಿಸ್‌ ನೀಡಿತ್ತು. ಆದರೆ ರವಿ ಒಮ್ಮೆಯೂ ವಿಚಾರಣೆಗೆ ಹಾಜರಾಗಿರಲಿಲ್ಲ.
 ಈ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಕೂಡಲೆ ಆಸ್ಪತ್ರೆಯಲ್ಲಿರುವ ರವಿ ಬೆಳಗೆರೆಯವರನ್ನು ಬಂಧಿಸುವಂತೆ ಆದೇಶಿಸಿದೆ.

Leave a Reply

Your email address will not be published.