ತ್ರಿವಳಿ ತಲಾಖ್ ನಿಷೇಧ ವಿಧೇಯಕಕ್ಕೆ ಕೇಂದ್ರ ಸಂಪುಟದಿಂದ ಅನುಮೋದನೆ

ದೆಹಲಿ : ಶುಕ್ರವಾರದಿಂದ ಚಳಿಗಾಲದ ಸಂಸತ್‌ ಅಧಿವೇಶನ ಆರಂಭವಾಗಿದ್ದು, ಅಧಿವೇಶನದಲ್ಲಿ ತ್ರಿವಳಿ ತಲಾಖ್‌ ವಿಧೇಯಕ 2017ಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ಡಿಸೆಂಬರ್‌ ಮೊದಲ ವಾರದಲ್ಲೇ ಕರಡು ವಿಧೇಯಕ ಸಿದ್ದಪಡಿಸಿದ್ದು, ಎಲ್ಲಾ ರಾಜ್ಯಗಳಿಗೂ ಕಳುಹಿಸಲಾಗಿತ್ತು. ಅಲ್ಲದೆ ಡಿಸೆಂಬರ್ 10ರ ಒಳಗೆ ಉತ್ತರಿಸುವಂತೆ ಸೂಚಿಸಲಾಗಿದ್ದು, ಇಂದು ಅಧಿವೇಶನದಲ್ಲಿ ಅನುಮೋದನೆ ದೊರೆತಿದೆ. ಅಲ್ಲದೆ ತ್ರಿವಲಿ ತಲಾಖನ್ನು ಜಾಮೀನು ರಹಿತ ಅಪರಾಧವೆಂದು ಘೋಷಿಸಲಾಗಿದ್ದು, ಇದಕ್ಕಾಗಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಅನುಮೋದನಯಲ್ಲಿ ತಿಳಿಸಲಾಗಿದೆ.

ಇದೇ ಆಗಸ್ಟ್‌ನಲ್ಲಿ ಮುಸ್ಲಿಂ ಮಹಿಳೆಯರ ವೈವಾಹಿಕ ಬದುಕನ್ನು ಕಸಿದುಕೊಳ್ಳುತ್ತಿರುವ ತ್ರಿವಳಿ ತಲಾಖ್ ಪದ್ದತಿಯನ್ನು ನಿಷೇಧಿಸಲು ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ಆದೇಶದಂತೆ ಕರಡು ವಿಧೇಯಕ ರೂಪಿಸಲಾಗಿದೆ.
ಈ ಕಾಯ್ದೆಯ ಪ್ರಕಾರ ತ್ರಿವಳಿ ತಲಾಖ್‌ ಸಂತ್ರಸ್ತೆ ತನ್ನ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ತನ್ನ ವಶಕ್ಕೆ ಪಡೆದುಕೊಳ್ಳಬಹುದು. ಅಲ್ಲದೆ ಗಂಡನಿಂದ ಜೀವನಾಂಶ ಕೋರಿ ಮ್ಯಾಜಿಸ್ಟ್ರೇಟ್‌ಗೆ ದೂರು ಸಲ್ಲಿಸಬಹುದು. ಮೂರು ಬಾರಿ ತಲಾಖ್ ಹೇಳಿದ ಕೂಡಲೆ ವಿಚ್ಛೇದನ ಎಂತಿದ್ದ ಕಾನೂನನ್ನು ತೆಗೆದು ಹಾಕಲಾಗಿದೆ.

Leave a Reply

Your email address will not be published.