ಸಹೋದ್ಯೋಗಿ ಹತ್ಯೆಗೆ ಸುಪಾರಿ ಪ್ರಕರಣ : ರವಿ ಬೆಳಗೆರೆ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು : ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ಬಂಧಿತರಾಗಿ ಬಳಿಕ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ರವಿ ಬೆಳಗೆರೆ ಅವರ ಜಾಮೀನು ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ.
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಅವರ ಕೊಲೆಗೆ ಸುಪಾರಿ ನೀಡಿದ್ದ ಆರೋಪದ ಮೇಲೆ ಕಳೆದ ಶನಿವಾರ ರವಿ ಬೆಳಗೆರೆಯವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರಿಗೆ ಡಿಸೆಂಬರ್‌ 16ರವರೆಗೆ ಷರತ್ತು ಬದ್ದ ಜಾಮೀನು ವಿಧಿಸಿತ್ತು. ಅನಾರೋಗ್ಯದಿಂದ ರವಿ ಬಳಲುತ್ತಿರುವ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಅವಧಿಯನ್ನು ಸೋಮವಾರದವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಸದ್ಯ ರವಿ ಬೆಳಗೆರೆಯವರನ್ನು ಜಯದೇವ ಆಸ್ಪತ್ರೆಗೆ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com