Mangalore : ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ಆಟಗಾರ

ಮಂಗಳೂರು : ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಆಟಗಾರ ಸಾವಿಗೀಡಾದ ಘಟನೆ ಮಂಜೇಶ್ವರದಲ್ಲಿ ನಡೆದಿದೆ.

ಮೃತ ಯುವಕನನ್ನು ಕಯ್ಯಾರು ನಿವಾಸಿಯಾದ ಪದ್ಮನಾಭ್‌ ಎಂದು ಗುರುತಿಸಲಾಗಿದೆ. ವೀಯಪದವು ಶಾಲಾ ಮೈದಾನದಲ್ಲಿ ಕ್ರಿಕೆಟ್‌ ಪಂದ್ಯಾವಳಿ ನಡೆಯುತ್ತಿದ್ದು, ಈ ವೇಳೆ ಪದ್ಮನಾಭ್‌ ಆಟದಲ್ಲಿ ಭಾಗಿಯಾಗಿದ್ದರು.

ಇನ್ನೇನು ಓವರ್‌ನ ಕೊನೆಯ ಎಸೆತ ಬಾಕಿ ಇತ್ತು. ಅಷ್ಟರಲ್ಲೇ ಪದ್ಮನಾಭ್ ಕುಸಿದುಬಿದ್ದಿದ್ದಾರೆ. ಕೂಡಲೆ ಸಹ ಆಟಗಾರರು ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯುವ ವೇಳೆ ಮಾರ್ಗ ಮಧ್ಯೆಯೇ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

Leave a Reply

Your email address will not be published.

Social Media Auto Publish Powered By : XYZScripts.com