ರಾಯ್‌ ಬರೇಲಿಯಿಂದ ನಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ : ಪ್ರಿಯಾಂಕಾ ಗಾಂಧಿ

ದೆಹಲಿ : ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಯ್ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ತಾನು ರಾಯ್‌ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ.  ಸೋನಿಯಾ ಗಾಂಧಿ ಅವರೇ ಸ್ಪರ್ಧಿಸುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಸುದ್ಧಿಯ ಹಿನ್ನೆಲೆಯಲ್ಲಿ ಸೋದರ, ಎಐಸಿಸಿಯ ನೂತನ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಸಹಾಯ ಮಾಡುವ ದೃಷ್ಠಿಯಿಂದ ಪ್ರಿಯಾಂಕ ರಾಯ್‌ ಬರೇಲಿಯಿಂದ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು.

ಆದರೆ ಈ ಕುರಿತು ಸ್ವತಃ ಪ್ರಿಯಾಂಕ ಸ್ಪಷ್ಟಪಡಿಸಿದದು, 209ರ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಪ್ರತೀ ಬಾರಿಯಂತೆ ನನ್ನ ತಾಯಿ ಸೋನಿಯಾ ಗಾಂಧಿಯೇ ಪ್ರತಿನಿಧಿಸುತ್ತಾರೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com