Cricket : ಶಿಖರ್ ಧವನ್ ಶತಕದ ಮಿಂಚು : ಭಾರತಕ್ಕೆ ಸರಣಿ ಜಯ

ವಿಶಾಖಪಟ್ಟಣಂ ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳಿಂದ ಸುಲಭ ಜಯಗಳಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು ಭಾರತ 2-1 ರಿಂದ ಗೆದ್ದುಕೊಂಡಿದೆ.

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ 44.5 ಓವರುಗಳಲ್ಲಿ 215 ರನ್ ಗಳಿಸಿ ಆಲೌಟ್ ಆಯಿತು. ಅರ್ಧಶತಕ ಬಾರಿಸಿದ ಶ್ರೀಲಂಕಾದ ಆರಂಭಿಕ ಬ್ಯಾಟ್ಸಮನ್ ಉಪುಲ್ ತರಂಗಾ 82 ಎಸೆತಗಳಲ್ಲಿ 95 ರನ್ ಹಾಗೂ ಸದೀರ ಸಮರವಿಕ್ರಮ 45 ರನ್ ಗಳಿಸಿದರು. ಭಾರತದ ಪರವಾಗಿ ಯಜುವೇಂದ್ರ ಸಿಂಗ್ ಚಹಲ್ 3, ಕುಲದೀಪ್ ಯಾದವ್ 3, ಹಾರ್ದಿಕ್ ಪಾಂಡ್ಯ 2, ಭುವನೇಶ್ವರ್ ಕುಮಾರ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 1 ವಿಕೆಟ್ ಪಡೆದರು.

ಗುರಿಯನ್ನು ಬೆನ್ನತ್ತಿದ ಭಾರತ 32.1 ಓವರುಗಳಲ್ಲಿ 2 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಭರ್ಜರಿ ಶತಕ ದಾಖಲಿಸಿದ ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ 85 ಎಸೆತಗಳಲ್ಲಿ 100 ರನ್ ಗಳಿಸಿದರು. ಮಿಂಚಿನ ಬ್ಯಾಟಿಂಗ್ ನಡೆಸಿ ಅರ್ಧಶತಕ ಬಾರಿಸಿದ ಶ್ರೇಯಸ್ ಅಯ್ಯರ್ 65 ರನ್ ಗಳಿಸಿದರು. 3 ವಿಕೆಟ್ ಪಡೆದ ಎಡಗೈ ಚೈನಾಮನ್ ಬೌಲರ್ ಕುಲದೀಪ್ ಯಾದವ್ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರು.

Leave a Reply

Your email address will not be published.