ದಕ್ಷಿಣ ಕನ್ನಡ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವಕೀಲ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ವಕೀಲರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಸ್ತೂಲಿನಲ್ಲಿ ಗುಂಡು ಹೊಡೆದುಕೊಂಡು ವಕೀಲ ದೇವಿಚರಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ಘಟ‌ನೆ ನಡೆದಿದೆ.

ವೃತ್ತಿಯಲ್ಲಿ ವಕೀಲರಾಗಿದ್ದ ದೇವಿಚರಣ್ (39) ಆತ್ಮಹತ್ಯೆ ಮಾಡಿಕೊಂಡ ನಿನ್ನೆ ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೋಲೀಸರು ಶಂಕಿಸಲಾಗಿದೆ. ಸಂಪಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.