ಗುಜರಾತ್‌ ಚುನಾವಣಾ ಫಲಿತಾಂಶದ ದಿನವೇ ಮಂಗಳೂರಿಗೆ ಮೋದಿ

ಮಂಗಳೂರು : ಇತ್ತೀಚೆಗಷ್ಟೇ ಓಖಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರಧಾನಿ ಮೋದಿ ಸೋಮವಾರ ಭೇಟಿ ನೀಡಲಿದ್ದಾರೆ. ಡಿಸೆಂಬರ್‌ 18ರಂದು ಕೇರಳ ಪ್ರವಾಸ ಮುಗಿಸಿ ಬಳಿಕ ಮಂಗಳೂರಿಗೆ ತೆರಳಲಿದ್ದು, ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದುಬಂದಿದೆ.

ಡಿಸೆಂಬರ್‌ 18ರ ರಾತ್ರಿ 11 ಗಂಟೆಗೆ ಮೋದಿ ಮಂಗಳೂರಿಗೆ ಬರಲಿದ್ದು, ಸರ್ಕ್ಯೂಟ್‌ಹೌಸ್‌ನಲ್ಲಿ ತಂಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೀ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಂಸದ ನಳೀನ್‌ ಕುಮಾರ್‌ ಕಟೀಲ್ ಮಾಹಿತಿ ನೀಡಿದ್ದಾರೆ.

ಗುಜರಾತ್‌ ಚುನಾವಣೆಯ ಫಲಿತಾಂಶದಂದೇ ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿರುವುದು ಅಚ್ಚರಿ ಉಂಟು ಮಾಡಿದೆ. ಅಲ್ಲದೆ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿದ್ದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com