BJP ವಾಮಾಚಾರದ ಮೂಲಕ ಅಧಿಕಾರಕ್ಕೆ ಬರೋ ಯತ್ನ ಮಾಡುತ್ತಿದೆ : ಈಶ್ವರ್‌ ಖಂಡ್ರೆ

ಬೀದರ್ : ಗುಜರಾತ್‌ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.

ಎರಡೂ ರಾಜ್ಯಗಳಲ್ಲೂ ಬಿಜೆಪಿ ವಾಮಾಚಾರದ ಮೂಲಕ ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಧಿಕಾರಕ್ಕೆ ಬರುವ ಯತ್ನ ಮಾಡಿದೆ ಎಂದು ಬಿಜೆಪಿ ಹಾಗೂ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ಗೂ ಕರ್ನಾಟಕಕ್ಕೂ ತುಂಬಾ ವ್ಯತ್ಯಾಸವಿದೆ. ಇಂದಿನ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್‌ನ ಬೇರು ಕರ್ನಾಟಕದಲ್ಲಿ ಭದ್ರವಾಗಿದೆ. ಗುಜರಾತ್‌ನಲ್ಲಿ ಇದ್ದ ಬಿಜೆಪಿ ಹವಾ ಕಡಿಮೆಯಾಗಿ ಕಾಂಗ್ರೆಸ್‌ ಸಮಬಲದ ಪೈಪೋಟಿ  ನೀಡಿದೆ ಎಂದಿದ್ದಾರೆ. ಇದೇ ವೇಳೆ ರಾಹುಲ್‌ ಗಾಂಧಿ 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿಯ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com