ಭುವನೇಶ್ವರ : ಅಪ್ರಾಪ್ತ ವಯಸ್ಸಿನ ಅಂಧ ಬಾಲಕಿಯ ಕತ್ತು ಸೀಳಿದ ದುಷ್ಕರ್ಮಿಗಳು

ಭುವನೇಶ್ವರ : ಅಪ್ರಾಪ್ರ ವಯಸ್ಸಿನ ಅಂಧ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಸೀಳಿ ಕೊಲೆಗೆ ಯತ್ನಿಸಿರುವ ಘಟನೆ ಒರಿಸ್ಸಾದ ಗಂಜಮ್‌ ಜಿಲ್ಲೆಯಲ್ಲಿ ನಡೆದಿದೆ.

ಭುವನೇಶ್ವರದ ಅಂಧರ ಶಾಲೆಯಲ್ಲಿ 7ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ, ಮಂಗಳವಾರ ರಾತ್ರಿ ಬಾಲಕಿ ತನ್ನ ಸಹೋದರ ಹಾಗೂ ತಾಯಿಯೊಂದಿಗೆ ಮನೆಯಲ್ಲಿ ಮಲಗಿದ್ದಳು. ಆದರೆ ಬೆಳಗ್ಗೆ ಆಕೆ ಇದ್ದಕ್ಕಿದ್ದಂತೆ ನಾಪತ್ತೆಯಾದ್ದರಿಂದ ತಾಯಿ ಹುಡುಕಾಡಲು ಪ್ರಾರಂಭಿಸಿದ್ದಾರೆ. ಬಳಿಕ ಮನೆಯ ಹಿಂಬದಿ ಮಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ನೋಡಿ, ಕೂಡಲೆ ಮಗಳನ್ನು ಪತ್ರಾಪುರ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಎಂಕೆಜಿಸಿ ಆಸ್ಪತ್ರೆಗೆ ಬಾಲಕಿಯನ್ನು ರವಾನಿಸಲಾಗಿತ್ತು. ಸದ್ಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನಡೆಯುತ್ತಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ಅಲ್ಲದೆ ಆಕೆಯ ಕತ್ತು ಸೀಳಿದ್ದರಿಂದ ಆಕೆ ಮಾತನಾಡುವ ಪರಿಸ್ಥಿತಿಯಲ್ಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಬರ್ಹಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿ ಮನೆಗೆ ಪೊಲೀಸರ ತಂಡ ತೆರಳಿ ಪರಿಶೀಲನೆ ನಡೆಸುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com