ಮೋದಿ ಕ್ಷಮೆಗೆ ಕಾಂಗ್ರೆಸ್ಸಿಗರ ಪಟ್ಟು : ಯಾರೂ ಕ್ಷಮೆ ಕೇಳಲ್ಲ ಎಂದು ಪ್ರಧಾನಿ ಪರ ನಿಂತ ವೆಂಕಯ್ಯ ನಾಯ್ಡು

ದೆಹಲಿ : ಗುಜರಾತ್ ಚುನಾವಣಾ ಪ್ರಚಾರದ ವೇಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ಪಾಕ್‌ನೊಂದಿಗೆ ಸೇರಿಕೊಂಡು ರಹಸ್ಯ ಸಭೆ ನಡೆಸಿದ್ದರು ಎಂದು ಪ್ರಧಾನಿ ಮೋದಿ ಹೇಳಿದ್ದರು. ಈ ಹೇಳಿಕೆ ಇಂದು ರಾಜ್ಯಸಭೆಯಲ್ಲಿ ತೀವ್ರ ಕೋಲಾಹಲ ಎಬ್ಬಿಸಿದ್ದು, ಮೋದಿ ಕ್ಷಮೆ ಕೇಳುವಂತೆ ಕಾಂಗ್ರೆಸ್‌ ಸದಸ್ಯರು ಪಟ್ಟು ಹಿಡಿದಿದ್ದಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಕೆಂಡಾಮಂಡಲರಾದ ಘಟನೆ ನಡೆದಿದೆ.

ಪ್ರತಿಪಕ್ಷಗಳ ಈ ರೀತಿಯ ವರ್ತನೆ ಸರಿಯಲ್ಲ. ಮೋದಿಯವರ ಹೇಳಿಕೆ ಕುರಿತಂತೆ ಯಾರೂ ಕ್ಷಮಾಪಣೆ ಕೇಳುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ ಎಂದು ವೆಂಕಯ್ಯ ನಾಯ್ಡು ಹೇಳಿರುವುದಾಗಿ ತಿಳಿದುಬಂದಿದೆ.

ಲೋಕಸಭೆಯಲ್ಲೂ ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಶೂನ್ಯ ವೇಳೆಯಲ್ಲಿ ಬಾವಿಗಿಳಿದು ಕೋಲಾಹಲ ಎಬ್ಬಿಸಿದರು. ಪ್ರಶ್ನೋತ್ತರ ಅವಧಿಯಲ್ಲೂ ಮೋದಿ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು ಎಂದು ತಿಳಿದುಬಂದಿದೆ.

 

Leave a Reply

Your email address will not be published.

Social Media Auto Publish Powered By : XYZScripts.com