WATCH : Reception ನಲ್ಲಿ ವಿರಾಟ್ – ಅನುಷ್ಕಾ ಬಿಂದಾಸ್ ಡಾನ್ಸ್..!

ಟೀಮ್ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ, ಡಿಸೆಂಬರ್ 11 ರಂದು ಇಟಲಿಯ ಟಸ್ಕನಿಯಲ್ಲಿ ವಿವಾಹವಾಗಿದ್ದರು. ಡಿಸೆಂಬರ್ 21 ರಂದು ಗುರುವಾರ ಸಾಯಂಕಾಲ ದೆಹಲಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ರಿಸೆಪ್ಷನ್ ಸಮಾರಂಭ ನಡೆಯಿತು.

ಆರತಕ್ಷತೆ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಹಾಗೂ ಸುರೇಶ್ ರೈನಾ ತಮ್ಮ ಪರಿವಾರದೊಂದಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅತಿಥಿಗಳೊಂದಿಗೆ ನವದಂಪತಿಗಳಾದ ವಿರಾಟ್ ಹಾಗೂ ಅನುಷ್ಕಾ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Leave a Reply

Your email address will not be published.

Social Media Auto Publish Powered By : XYZScripts.com