3 ದಿನಗಳ ಗುಜರಾತ್ ಭೇಟಿ : ಸೋಮನಾಥ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ರಾಹುಲ್

ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬಳಿಕ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೊದಲ ಬಾರಿಗೆ ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. 3 ದಿನಗಳ ಗುಜರಾತ್ ಭೇಟಿಯನ್ನು ಸೋಮನಾಥ್ ಮಂದಿರದಿಂದ ಆರಂಭಿಸಿದ ರಾಹುಲ್, ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಗುಜರಾತ್ ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣಗಳ ಬಗ್ಗೆ ರಾಹುಲ್ ಗಾಂಧಿ ತಮ್ಮ ಶಾಸಕರೊಂದಿಗೆ ಚರ್ಚೆ ನಡೆಸುವ ಉದ್ದೇಶದಿಂದ ಭೇಟಿ ನೀಡಿದ್ದಾರೆ. ಹಿಮಾಚಲ ಪ್ರದೇಶ ಹಾಗೂ ಗುಜರಾತ್ ಎರಡೂ ರಾಜ್ಯಗಳಲ್ಲಿ ಸೊಲನುಭವಿಸಿದರೂ, ಗುಜರಾತಿನಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಲ್ಲಿ ಕಾಂಗ್ರೆಸ್ ಸಫಲವಾಗಿತ್ತು.

ಗುಜರಾತ್ ವಿಧಾನಸಭೆಯ ಒಟ್ಟು 182 ಸ್ಥಾನಗಳ ಪೈಕಿ ಕಾಂಗ್ರೆಸ್ 77 ರಲ್ಲಿ ಗೆಲುವು ಸಾಧಿಸಿತ್ತು. 99 ಸ್ಥಾನಗಳನ್ನು ಜಯಿಸಿದ ಭಾರತೀಯ ಜನತಾ ಪಕ್ಷ  ಸರ್ಕಾರ ರಚಿಸಲಿದೆ. ವಿಜಯ್ ರೂಪಾನಿ ಮುಖ್ಯಮಂತ್ರಿ ಹಾಗೂ ನಿತಿನ್ ಪಟೇಲ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

 

 

Leave a Reply

Your email address will not be published.

Social Media Auto Publish Powered By : XYZScripts.com