Cricket : T20ಯಲ್ಲಿ ರೋಹಿತ್ ವೇಗದ ಶತಕ : Abd ದಾಖಲೆ ಮುರಿದ Hit-Man..!

ಟೀಮ್ ಇಂಡಿಯಾದ ಹಂಗಾಮಿ ನಾಯಕ ಹಾಗೂ ಆರಂಭಿಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಇಂದೋರ್ ನಲ್ಲಿ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದರು. ಕೇವಲ 43 ಎಸೆತಗಳಲ್ಲಿ 118 ರನ್ ಬಾರಿಸಿದ ರೋಹಿತ್ 12 ಬೌಂಡರಿ ಹಾಗೂ 10 ಸಿಕ್ಸರ್ ಸಿಡಿಸಿದ್ದರು.

35 ಎಸೆತಗಳಲ್ಲಿ 100 ಗಡಿ ದಾಟಿ ಟಿ20ಯಲ್ಲಿ ವೇಗದ ಶತಕ ಪುರೈಸಿದ ರೋಹಿತ್, ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಡೇವಿಡ್ ಮಿಲ್ಲರ್ ಅಕ್ಟೋಬರ್ ನಲ್ಲಿ ಬಾಂಗ್ಲಾದೇಶದ ವಿರುದ್ಧ 35 ಎಸೆತಗಳಲ್ಲಿ  ಶತಕ ಪೂರೈಸಿದ್ದರು.

ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯನ್ನು ಸಹ ರೋಹಿತ್ ತಮ್ಮದಾಗಿಸಿಕೊಂಡಿದ್ದಾರೆ. ಇದುವರೆಗೆ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಹಿಟ್ ಮ್ಯಾನ್ ಮುರಿದಿದ್ದಾರೆ. ರೋಹಿತ್ ಶರ್ಮಾ 2017 ರಲ್ಲಿ 64 ಸಿಕ್ಸರ್ ಸಿಡಿಸಿದ್ದಾರೆ. ಎ ಬಿ ಡಿವಿಲಿಯರ್ಸ್ 2015 ರಲ್ಲಿ 63 ಸಿಕ್ಸರ್ ಬಾರಿಸಿದ್ದರು. ಕ್ರಿಸ್ ಗೇಯ್ಲ್ 2012 ರಲ್ಲಿ 59 ಸಿಕ್ಸರ್ ಸಿಡಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com