Cricket : ದ. ಆಫ್ರಿಕಾ ಏಕದಿನ ಸರಣಿ : ತಂಡಕ್ಕೆ ಮರಳಿದ ಕ್ಯಾಪ್ಟನ್ ಕೊಹ್ಲಿ

ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 6 ಏಕದಿನ ಪಂದ್ಯಗಳು ನಡೆಯಲಿದ್ದು, ಫೆಬ್ರವರಿ 1 ರಿಂದ ಸರಣಿ ಆರಂಭಗೊಳ್ಳಲಿದೆ. ಶ್ರೀಲಂಕಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ ವಾಪಸಾಗಿದ್ದು, ತಂಡವನ್ನು ಮುನ್ನಡೆಸಲಿದ್ದಾರೆ.

ಗಾಯಗೊಂಡಿದ್ದ ಕೇದಾರ್ ಜಾಧವ್ ಹಾಗೂ ಶಾರ್ದೂಲ್ ಠಾಕೂರ್ ಮರಳಿದ್ದಾರೆ. ಕೆ ಎಲ್ ರಾಹುಲ್, ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾಗೆ ಸ್ಥಾನ ನೀಡಲಾಗಿಲ್ಲ. ಕುಲದೀಪ್ ಯಾದವ್, ಚಹಲ್ ಹಾಗೂ ಶ್ರೇಯಸ್ ಅಯ್ಯರ್ ಗೆ ಅವಕಾಶ ಕಲ್ಪಿಸಲಾಗಿದೆ.

ತಂಡ ಇಂತಿದೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಮಹೇಂದ್ರ ಸಿಂಗ್ ಧೋನಿ, ಶ್ರೇಯಸ್ ಅಯ್ಯರ್, ಮನಿಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಯಜುವೇಂದ್ರ ಸಿಂಗ್ ಚಹಲ್, ಕುಲದೀಪ್ ಯಾದವ್, ಮಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಅಕ್ಸರ್ ಪಟೇಲ್.

Leave a Reply

Your email address will not be published.

Social Media Auto Publish Powered By : XYZScripts.com