ಮಹದಾಯಿ ವಿವಾದವನ್ನು ಬಗೆಹರಿಸೋ ಪರಿಸ್ಥಿತಿಯಲ್ಲಿ ನಾವಿಲ್ಲ : ಕೈಚೆಲ್ಲಿ ಕೂತ BSY !!!

ಬೆಂಗಳೂರು : ಮಹದಾಯಿ ವಿವಾದವನ್ನು ನಾವು ಬಗೆಹರಿಸುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಮಾಜಿ ಸಿಎಂ ಬಿಎಸ್‌ವೈ ಹೇಳಿಕೆ ನೀಡಿದ್ದು, ರೈತರ ಆಕ್ರೋ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ವಿರುದ್ದ ಹರಿಹಾಯ್ದಿರುವ ಬಿಎಸ್‌ವೈ, ಸಿಎಂ ಸಿದ್ದರಾಮಯ್ಯ ಸಮಸ್ಯೆಯನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಮಂಗಳವಾರ ಸಂಜೆ ಬಿಜೆಪಿ ಕಚೇರಿ ಎದುರು ಹೋರಾಟ ಮಾಡುತ್ತಿದ್ದ ಮಹದಾಯಿ ಹೋರಾಟಗಾರರ ಜೊತೆ ಬಿಎಸ್‌ವೈ ಸಂಧಾನ ಸಭೆ ನಡೆಸಿದರು. ಆದರೆ ಸಂಧಾನ ವಿಫಲವಾದ ಬಳಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಇದು ಬಿಜೆಪಿಯಿಂದ ಮಾತ್ರ ಸಾಧ್ಯ ಎನ್ನುತ್ತಿದ್ದಾರೆ. ಆದರೂ ನಾವು ಮಹದಾಯಿ ವಿಚಾರದಲ್ಲಿ ಗೋವಾ ಸಿಎಂಗೆ ಮನವಿ ಮಾಡಿದ್ದೆವು. ನಮ್ಮ ಮನವಿಗೆ ಗೋವಾ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು ಎಂದಿದ್ದಾರೆ.

ಪರ್ರಿಕ್ಕರ್‌ ಲಿಖಿತ ಪತ್ರವನ್ನು ಕಳುಹಿಸಿದ್ದಾರೆ. ಆದರೆ ಅದನ್ನು ಸಿಎಂ ಸಿದ್ದರಾಮಯ್ಯ ವಿರೋಧಿಸಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಗೋವಾ ಕಾಂಗ್ರೆಸ್‌ ನಾಯಕರಿಗೆ ಹೇಳಿ ಕಿಚ್ಚು ಹೆಚ್ಚಾಗುವಂತೆ ಮಾಡಿದ್ದಾರ. ಹೋರಾಟಗಾರರನ್ನು ಸಿಎಂ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಿಜವಾಗಲೂ ಕಾಳಜಿ ಇದ್ದರೆ ಸಮಸ್ಯೆಯನ್ನು ಇತ್ಯರ್ಥಪಡಿಸಿ ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com