Ashes Cricket : ಬಾಕ್ಸಿಂಗ್ ಡೇ ಟೆಸ್ಟ್ : ಡೇವಿಡ್ ವಾರ್ನರ್ ಶತಕ

ಮೇಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಆ್ಯಶಸ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಆರಂಭಗೊಂಡಿತು. ಬಾಕ್ಸಿಂಗ್ ಡೇ ಟೆಸ್ಟ್ ನ ಮೊದಲ ದಿನ ಟಾಸ್ ಗೆದ್ದ ಆತಿಥೇಯ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ದುಕೊಂಡಿತು.

ಮೊದಲ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು 244 ರನ್ ಸೇರಿಸಿದೆ. ಆಸ್ಟ್ರೇಲಿಯಾದ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ ಶತಕ ಸಿಡಿಸಿದರು. 151 ಎಸೆತಗಳನ್ನೆದುರಿಸಿದ ಡೇವಿಡ್ ವಾರ್ನರ್ 103 ರನ್ ಗಳಿಸಿ ಜೇಮ್ಸ್ ಆ್ಯಂಡರ್ಸನ್ ಎಸೆತದಲ್ಲಿ ಔಟಾದರು. ಅರ್ಧಶತಕ ಬಾರಿಸಿರುವ ನಾಯಕ ಸ್ಟೀವ್ ಸ್ಮಿತ್ (65*) ಹಾಗೂ ಶಾನ್ ಮಾರ್ಷ್ (31*) ಅಜೇಯರಾಗುಳಿದಿದ್ದಾರೆ.

ಇಂಗ್ಲೆಂಡ್ ಪರವಾಗಿ ಜೇಮ್ಸ್ ಆ್ಯಂಡರ್ಸನ್ , ಸ್ಟುವರ್ಟ್ ಬ್ರಾಡ್ ಹಾಗೂ ಕ್ರಿಸ್ ವೋಕ್ಸ್ ತಲಾ 1 ವಿಕೆಟ್ ಪಡೆದರು. ಸರಣಿಯನ್ನು ಈಗಾಗಲೇ ತನ್ನದಾಗಿಸಿಕೊಂಡಿರುವ ಆಸ್ಟ್ರೇಲಿಯಾ 2-0 ಮುನ್ನಡೆ ಹೊಂದಿದೆ.

 

Leave a Reply

Your email address will not be published.