ಮಹದಾಯಿ ವಿವಾದ ಬಗೆಹರಿಸಲು ಮೂರೂ ಪಕ್ಷಗಳಿಗೆ ಡೆಡ್‌ಲೈನ್‌ ನೀಡಿದ ಹೋರಾಟಗಾರರು

ಬೆಂಗಳೂರು : ಮಹದಾಯಿ ವಿಚಾರವಾಗಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ನಾಯಕರು ಚರ್ಚಿಸಿ ಜನವರಿಯವೊಳಗೆ ಪ್ರಧಾನಿ ಭೇಟಿಗೆ ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ ಸಿಎಂ ನಿವಾಸದೆದುರು ಮೌನ ಪ್ರತಿಭಟನೆ ಮಾಡುವುದಾಗಿ ಮಹದಾಯಿ ಹೋರಾಟಗಾರರು ಡೆಡ್‌ ಲೈನ್‌ ನೀಡಿದ್ದಾರೆ.

ಬುಧವಾರ ಕಾಂಗ್ರೆಸ್‌ ಕಚೇರಿ ಎದುರು, ಬಿಜೆಪಿ ಹಾಗೂ ಮಹದಾಯಿ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಬಳಿಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪಾದಯಾತ್ರೆ ಮೂಲಕ ತೆರಳಿದ ಹೋರಾಟಗಾರರು ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರೇಶ್‌ ಸೊಬರದ ಮಠ, ಜನವರಿಯ ಒಳಗಾಗಿ ಮೂರೂ ಪಕ್ಷಗಳು ಚರ್ಚಿಸಿ ಪ್ರಧಾನಿಗಳ ಭೇಟಿಗೆ ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ ಮತ್ತೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Leave a Reply

Your email address will not be published.

Social Media Auto Publish Powered By : XYZScripts.com