ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್ : ಭುಗಿಲೆದ್ದ ರೈತರ ಆಕ್ರೋಶ

ಬೆಳಗಾವಿ : ಮಹದಾಯಿ ನದಿ ನೀರಿನ ವಿಚಾರ ಕುರಿತಂತೆ ರೈತರ ಆಕ್ರೋಶ ಭುಗಿಲೆದ್ದಿದೆ. ಒಂದೆಡೆ ಹೋರಾಟಗಾರರು ಬೆಂಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಕಚೇರಿ ಎದುರು ಧರಣಿ ನಡೆಸುತ್ತಿದ್ದರೆ ಮತ್ತೊಂದೆಡೆ ಉತ್ತರ ಕರ್ನಾಟಕದಲ್ಲಿ ಬಂದ್‌ ಆಚರಿಸಿದ್ದಾರೆ.

ಕಳಸಾ -ಬಂಡೂರಿ ಹೋರಾಟ ಸಮಿತಿ ಸೇರಿದಂತೆ ನೂರಕ್ಕೂ ಹೆಚು ಕನ್ನಡ ಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದದು, ಎಲ್ಲೆಡೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಕೆಲವೆಡೆ ವಾಹನಗಳಿಗೆ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದೆ.

ಧಾರವಾಡ, ಗದಗ್‌, ಬೆಳಗಾವಿ, ಬಾಗಲಕೋಟೆಯಲ್ಲಿ ಬಂದ್‌ ಆಚರಣೆ ಯಶಸ್ವಿಯಾಗಿದೆ. ರೈತರಿಗೆ ನೂರಾರು ಸಂಘಟನೆಯ ಕಾರ್ಯಕರ್ತರು ಸಾಥ್‌ ನೀಡಿದ್ದು, ಸರ್ಕಾರದ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಇನ್ನು ಬಂದ್‌ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಲಾರಿಗಳ ಓಡಾಟಕ್ಕೆ ತಡೆ ಹಿಡಿಯಲಾಗಿದೆ. ಅಲ್ಲದೆ ಅಕ್ಕಮಹಾದೇವಿ ವಿವಿ, ಕಾನೂನು ವಿವಿ ಹಾಗೂ ವಿಟಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಅಲ್ಲದೆ ಅನೇಕ ಭಾಗಗಳಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

Leave a Reply

Your email address will not be published.

Social Media Auto Publish Powered By : XYZScripts.com