ನಾನು ಯಡಿಯೂರಪ್ಪನಂತೆ ಸುಳ್ಳು ಹೇಳುವ ವ್ಯಕ್ತಿಯಲ್ಲ : CM ಸಿದ್ದರಾಮಯ್ಯ

ಚಿತ್ರದುರ್ಗ : ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈ ವಿಚಾರವಾಗಿ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದಷ್ಟು ನೀರು ಸಿಗಬೇಕು. ಅದಕ್ಕಾಗಿ ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ಈ ವಿಚಾರವಾಗಿ ಮಾತುಕತೆಗೆ ಬರುವಂತೆ ಗೋವಾ ಸಿಎಂಗೆ ಪತ್ರ ಬರೆದಿರುವುದಾಗಿ ಸಿದ್ಧರಾಮಯ್ಯ ಹೇಳಿದ್ದಾರೆ.

ನಾವು ಬಿಜೆಪಿಯವರಂತೆ ಅಲ್ಲ. ನಾವು ರೈತರ ನೋವನ್ನು ಎಂದಿಗೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ. ನಮಗೆ ಅದರ ಅಗತ್ಯವೂ ಇಲ್ಲ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ವಾಗ್ದಾಳಿ ನಡೆಸಿದ ಸಿಎಂ, ನಾನು ಯಡಿಯೂರಪ್ಪನಂತೆ ಸುಳ್ಳು ಹೇಳುವುದಿಲ್ಲ. ಮಹದಾಯಿ ಹೋರಾಟಗಾರರು ಕಾಂಗ್ರೆಸ್‌ ವಿರುದ್ದ ಹೋರಾಟ ಮಾಡುತ್ತಿಲ್ಲ. ಅವರು ಹೋರಾಟ ಮಾಡುತ್ತಿರುವುದು ವಚನ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com