ಯೋಧರ ಗುಂಡಿಗೆ ಬಲಿಯಾದ 4 ಅಡಿಯ ಉಗ್ರ BJP ಗೆ ಸೇರಲು ಯತ್ನಿಸಿದ್ದ..!!!

ದೆಹಲಿ : ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಗುಂಡಿಗೆ ಬಲಿಯಾಗಿದ್ದ 4 ಅಡಿ ಎತ್ತರದ ಉಗ್ರ ನೂರ್‌ ಮಹಮ್ಮದ್‌ ಬಿಜೆಪಿ ಸೇರ್ಪಡೆಯಾಗಲು ಪ್ರಯತ್ನಿಸಿದ್ದ ಎಂದು ತಿಳಿದುಬಂದಿದೆ.
ಪಾಕಿಸ್ತಾನ ಮೂಲದ ಉಗ್ರನಾಗಿದ್ದ ನೂರ್‌ ಮಹಮ್ಮದ್‌ ಜೈಷ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಗೆ ಸೇರಿದ್ದ. 2003ರಲ್ಲಿ ಈತ ದೆಹಲಿಯಲ್ಲಿರುವ ಬಿಜೆಪಿ ಕಚೇರಿದೆ ತೆರಳಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆಯಲು ಪ್ರಯತ್ನಿಸಿದ್ದಲ್ಲದೆ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಕೆಲ ನಾಯಕರ ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂದು ಡಿಎನ್ಎ ವರದಿಯಲ್ಲಿ ತಿಳಿಸಿದೆ.
ಆದರೆ ಈತ ಬಿಜೆಪಿ ಸೇರ್ಪಡೆಗೂ ಮುನ್ನ ದೆಹಲಿಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದ ಕಾರಣ ಬಿಜೆಪಿಗೆ ಸೇರ್ಪಡೆಗೊಳ್ಳಲು ಸಾಧ್ಯವಾಗಿರಲಿಲ್ಲ.
 ಈತ ಕಾಶ್ಮೀರ ಸೇರಿದಂತೆ ಹಲವೆಡೆ ಉಗ್ರ ಕೃತ್ಯಗಳಲ್ಲಿ ಭಾಗಿಯಾಗಿದ್ದು, ದೆಹಲಿ ನ್ಯಾಯಾಲಯ ಈತನನ್ನು ಸಾವಿನ ವ್ಯಾಪಾರಿ ಎಂದಿತ್ತು.
ಮಂಗಳವಾರ ಭದ್ರತಾ ಪಡೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಈತನನ್ನು ಹತ್ಯೆ ಮಾಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com