ಕಲ್ಲಡ್ಕದಲ್ಲಿ ಯುವಕನ ಮೇಲೆ ತಲ್ವಾರ್‌ನಿಂದ ಹಲ್ಲೆ : ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ

ಮಂಗಳೂರು : ದಕ್ಷಿಣ ಕನ್ಡ ಜಿಲ್ಲೆಯ ಕಲ್ಲಡ್ಕದಲ್ಲಿ ಯುವಕನೊಬ್ಬನ ಮೇಲೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ತಲ್ವಾರ್‌ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಕೇಶವ ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದೆ ಕಾಂಗ್ರೆಸ್‌ ಮುಖಂಡ ಜಲೀಲ್‌ ಕರೋಪಾಡಿ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.

ಮಂಗಳವಾರ ರಾತ್ರಿ ಕಲ್ಲಡ್ಕದಿಂದ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್‌ನಿಂದ ಕೇಶವನ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಕೇಶವ್‌ ತಲೆ ಹಾಗೂ ಕೈಗೆ ಬಲವಾದ ಪೆಟ್ಟು ಬಿದ್ದಿದ್ದು, ಕಲ್ಲಡ್ಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಾಲಾಗುತ್ತಿದೆ.

ಘಟನೆ ನಡೆದ ಬಳಿಕ ಕಿಡಿಗೇಡಿಗಳು ಬಸ್ಸೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕಲ್ಲಡ್ಕದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಹಾಕಿದ್ದಾರೆ. ಜೊತೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಿರುವಂತೆ ಎಚ್ಚರಿಕೆ ವಹಿಸಲಾಗಿದೆ.

 

Leave a Reply

Your email address will not be published.