Romance ಮಾಡೋಣ ಬಾ ಎಂದ ಬಾಲಕ….ಬರಲ್ಲ ಅಂದ್ಲು ಈಕೆ….ಆಮೇಲಾಗಿದ್ದೇ ಬೇರೆ ?!!

ಲಖನೌ : ರೊಮ್ಯಾನ್ಸ್ ಮಾಡಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿಯ ಮೇಲೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.

ಮಥುರಾದ ರಸ್ತೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳೇ ಶಾಲೆಗೆಂದು ಹೋಗುತ್ತಿದ್ದಳು. ಈ ವೇಳೆ ಅದೇ ಶಾಲೆಯ 16 ವರ್ಷದ ಬಾಲಕನೊಬ್ಬ ಆಕೆಗೆ ರೊಮ್ಯಾನ್ಸ್‌ ಮಾಡೋಣ ಬಾ ಎಂದು ಕರೆದಿದ್ದಾನೆ. ಅದಕ್ಕೆ ವಿದ್ಯಾರ್ಥಿನಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.

ವಿದ್ಯಾರ್ಥಿನಿ ತವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮಥುರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪ್ರಾಪ್ತ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com