ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರ ಸಖತ್‌ Plan……ಏನದು ?

ಬೆಂಗಳೂರು : ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪೊಲೀಸರಿಗೆ ತಲೆನೋವು ಹೆಚ್ಚುತ್ತಿದೆ. ಡಿಸೆಂಬರ್‌ 31ರ ರಾತ್ರಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ಕಳೆದ ಬಾರಿ ಬ್ರಿಗೇಡ್‌ ಹಾಗೂ ಎಂಜಿ ರಸ್ತೆಯಲ್ಲಿ ನಡೆದಿದ್ದ ಹೊಸ ವರ್ಷಾಚರಣೆಯಲ್ಲಿ ಅಹಿತಕರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ತಲೆ ತಗ್ಗಿಸುವಂತಾಗಿತ್ತು. ಆದರೆ ಈ ಬಾರಿ ಆ ರೀತಿ ನಡೆಯದಿರಲು ಹೊಸ ಪ್ಲಾನ್‌ ಮಾಡಲಾಗಿದ್ದು, ಪಾರ್ಟಿ ಮಾಡಲು ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡುವ ಕುರಿತು ಚಿಂತನೆ ಮಾಡಲಾಗಿದೆ. ಶೇ.30ರಷ್ಟು ಭಾಗದಲ್ಲಿ ಮಹಿಳೆಯರು ಹಾಗೂ ಶೇ. 70ರಷ್ಟು ಭಾಗದಲ್ಲಿ ಪುರುಷರು ಕುಣಿದು ಕುಪ್ಪಳಿಸಲು ಅವಕಾಶ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಗೃಹ ಸಚಿವ ರಾಮಲಿಂಗಾರೆಡ್ಡಿ, ಈ ಬಾರಿ ನ್ಯೂ ಇಯರ್‌ ಸೆಲೆಬ್ರೇಷನ್‌ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್ ಮಾಡಲು ಪೊಲೀಸ್‌ ಇಲಾಖೆಗೆ ಖಡಕ್‌ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿದುಬಂದಿದೆ. ಜೊತೆಗೆ ಎಂ.ಜಿ ಹಾಗೂ ಬ್ರಿಗೇಡ್‌ ರಸ್ತೆಯಲ್ಲಿರುವ ಎಲ್ಲಾ ಅಂಗಡಿಗಳ ಮಾಲೀಕರ ಜೊತೆ ಚರ್ಚಿಸಿ ಪ್ರತೀ ಅಂಗಡಿ ಎದುರಿಗೂ ಸಿಸಿ ಕ್ಯಾಮರಾ ಅಳವಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

 

Leave a Reply

Your email address will not be published.