ಅಂಜನೀಪುತ್ರ ಚಿತ್ರ ಪ್ರದರ್ಶನವನ್ನೇ ಸ್ಥಗಿತ ಮಾಡುವಂತೆ ಆದೇಶ ನೀಡಿದ ಕೋರ್ಟ್‌….ಯಾಕೆ ?

ಬೆಂಗಳೂರು : ಅಂಜನೀಪುತ್ರ ಸಿನಿಮಾಗೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರ ನಿರ್ಮಾಪಕ , ನಿರ್ದೇಶಕ ಹಾಗೂ ವಿತರಕರ ವಿರುದ್ದ ನ್ಯಾಯಾಂಗ ನಿಂದನೆ ಅರ್ಜಿ ದಾಖಲಾಗಿದ್ದು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ಈ ಸಿನಿಮಾದಲ್ಲಿ ವಕೀಲರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ವಕೀಲ ನಾರಾಯಣಸ್ವಾಮಿ ಕೋರ್ಟ್‌ಗೆ ದೂರಿನ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜನವರಿ 2ರವರೆಗೆ ಪ್ರದರ್ಶನಕ್ಕೆ ತಡೆ ನೀಡಿತ್ತು. ಆದರೆ ಕೋರ್ಟ್ ಆದೇಶದ ಪ್ರತಿ ತಲುಪದ ಹಿನ್ನೆಲೆಯಲ್ಲಿ ಚಿತ್ರ ನಿರ್ಮಾಪಕರು , ವಿತರಕರು ಪ್ರದರ್ಶನ ಮುಂದುವರಿಸಿದ್ದರು.

ಕೋರ್ಟ್‌ ತಡೆ ನೀಡಿದ್ದರೂ ಚಿತ್ರ ಪ್ರದರ್ಶನ ಮುಂದುವರಿಸಿದ್ದ ಹಿನ್ನೆಲೆಯಲ್ಲಿ ವಕೀಲರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ಡಿ.ಜಿ, ಐಜಿಪಿ ಅವರ ಮೂಲಕ ಆದೇಶ ಜಾರಿಗೊಳಿಸುವಂತೆ ಸೂಚಿಸಿದೆ.

ನ್ಯಾಯಾಲಯದ ಆದೇಶವನ್ನೂ ಮೀರಿ ಸಿನಿಮಾ ಪ್ರದರ್ಶನ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com