ಮಹದಾಯಿ ವಿವಾದದಲ್ಲಿ ಪರ್ರಿಕ್ಕರ್‌, BSY ಸೇರ್ಕೊಂಡು ಸ್ಟಂಟ್‌ ಮಾಡ್ತಿದ್ದಾರೆ : CM ಸಿದ್ಧರಾಮಯ್ಯ

ತುಮಕೂರು : ಮಹದಾಯಿ ನದಿ ನೀರು ಹಂಚಿಕೆ ವಿವಾದ ಮಾತುಕತೆಯ ಮೂಲಕವೇ ಬಗೆಹರಿಯಬೇಕು. ಮಾತುಕತೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ. ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಲಿ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಡಿ.15 ಕ್ಕೆ ರೈತರಿಗೆ ಸಿಹಿ ಸುದ್ದಿ ಕೊಡ್ತೀನಿ ಎಂದಿದ್ದರು. ಆದ್ರೆ ಕೊಡ್ಲಿಲ್ಲ, ಹಾಗಾಗಿ ರೈತರಿಗೆ ನಿರಾಸೆಯಾಗಿದೆ. ಮನೋಹರ್ ಪರಿಕ್ಕರ್ ಹಾಗೂ ಯಡಿಯೂರಪ್ಪ ಇಬ್ಬರು ಸೇರಿಕೊಂಡು ಪೊಲಿಟಿಕಲ್ ಸ್ಟಂಟ್ ಮಾಡುತ್ತಿದ್ದಾರೆ. ಹಾಗಂತ ಗೋವಾ ನೀರಾವರಿ ಸಚಿವರೇ ಹೇಳಿದ್ದಾರೆ. ನಾನೇ ಬಂದು ಮಾತಾಡ್ತೀನಿ ಅಂತಾ ಪತ್ರ ಬರೆದಿದ್ದೆ. ಆದರೆ ಚುನಾವಣೆ ನಂತರ ಬನ್ನಿ ಎಂದು ಪರಿಕ್ಕರ್ ಹೇಳಿದ್ದಾರೆ. ಇಬ್ಬರ ನಾಟಕದಿಂದ ರೈತರು ಮೋಸಹೋಗಿ ಈಗ ಚಳುವಳಿ ಮಾಡ್ತಿದ್ದಾರೆ. ನನಗೆ ರಾಜಕೀಯದಲ್ಲಿ 40 ವರ್ಷಕ್ಕೂ ಹೆಚ್ಚು ಅನುಭವ ಇದೆ. ಒಂದು ಪಕ್ಷ ಇನ್ನೊಂದು ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಿರೋದು ಇದೇ ಮೊದಲು ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ತಪ್ಪು ಮಾಡಿ ಸಿಕ್ಕಿಹಾಕಿಕೊಂಡ ಯಡಿಯೂರಪ್ಪ ಹೋರಾಟಗಾರರನ್ನು ಡೈವರ್ಟ್‌ ಮಾಡುವ ಕೆಲಸ ಮಾಡುತ್ತಿದ್ದಾರೆ. ವಿವಾದ ಇತ್ಯರ್ಥಕ್ಕೆ ನಮ್ಮ ಸರ್ಕಾರ ಸಿದ್ದವಿದ್ದು, ಮೋದಿ ಮಾತುಕತೆ ನಡೆಸಬೇಕಿದೆ ಎಂದಿದ್ದಾರೆ.

ಇದೇ ವೇಳೆ ಹೆಬ್ಬಾಳ ಕ್ಷೇತ್ರದಿಂದ ಸ್ಫರ್ಧೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸಿಎಂ, ನಾನು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಬೇರೆ ಯಾವ ಕ್ಷೇತ್ರಕ್ಕೂ ಹೋಗಲ್ಲ. ನನಗೆ ಟಿಕೆಟ್ ನೀಡೋದು ರಾಹುಲ್ ಗಾಂಧಿ. ವದಂತಿ ಹಬ್ಬಿಸೋರು ಅಲ್ಲ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com