Ashes Cricket : ಮುನ್ನಡೆ ಸಾಧಿಸಿದ ಇಂಗ್ಲೆಂಡ್ : ಆಸೀಸ್ ಗೆ ವಾರ್ನರ್ ಆಸರೆ

ಮೆಲ್ಬರ್ನ್ ನಲ್ಲಿ ನಡೆಯುತ್ತಿರುವ ಮೂರನೇ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದೆ. ಅಲಿಸ್ಟರ್ ಕುಕ್ ದ್ವಿಶತಕದ ನೆರವಿನಿಂದ ಬೃಹತ್ ಮೊತ್ತ ಸೇರಿಸಿದ ಇಂಗ್ಲೆಂಡ್ 491 ಕ್ಕೆ ಆಲೌಟ್ ಆಯಿತು.

ಈ ಮೂಲಕ ಇಂಗ್ಲೆಂಡ್ 164 ರನ್ ಮುನ್ನಡೆ ಪಡೆದುಕೊಂಡಿತು. ಆಸ್ಟ್ರೇಲಿಯಾ ಪರವಾಗಿ ಪ್ಯಾಟ್ರಿಕ್ ಕಮಿನ್ಸ್ 4, ಮಿಚೆಲ್ ಸ್ಟಾರ್ಕ್ 3, ಜೋಶ್ ಹೇಜಲ್ವುಡ್ 3 ವಿಕೆಟ್ ಪಡೆದರು.

ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ನಾಲಕ್ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 102 ರನ್ ಗಳಿಸಿದೆ. ಡೇವಿಡ್ ವಾರ್ನರ್ (40) ಹಾಗೂ ಸ್ಟೀವ್ ಸ್ಮಿತ್ (25) ಅಜೇಯರಾಗುಳಿದಿದ್ದಾರೆ. ಇಂಗ್ಲೆಂಡ್ ಪರವಾಗಿ ಜೇಮ್ಸ್ ಆ್ಯಂಡರ್ಸನ್ ಹಾಗೂ ಕ್ರಿಸ್ ವೋಕ್ಸ್ ತಲಾ 1 ವಿಕೆಟ್ ಪಡೆದರು. ಆಸ್ಟ್ರೇಲಿಯಾ ಇಂಗ್ಲೆಂಡ್ ಗಿಂತ ಇನ್ನೂ 61 ರನ್ ಹಿನ್ನಡೆಯಲ್ಲಿದೆ.

Leave a Reply

Your email address will not be published.

Social Media Auto Publish Powered By : XYZScripts.com