Mumbai ಅಗ್ನಿ ದುರಂತ : ಹುಟ್ಟುಹಬ್ಬ ಆಚರಿಸಿಕೊಳ್ತಿದ್ದ ಮಹಿಳೆ ಸೇರಿ 14 ಮಂದಿ ಸಜೀವ ದಹನ

ಮುಂಬೈ : ವಾಣಿಜ್ಯ ನಗರಿ ಮುಂಬೈನಲ್ಲಿ ಭಾರೀ ಅಗ್ನಿ ಅವಗಡ ಸಂಭವಿಸಿದ್ದು, ಘಟನೆಯಲ್ಲಿ 14 ಮಂದಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂಬೈನ ಲೋವರ್‌ ಪ್ಯಾರೆಲ್‌ನ ಕಮಲಾ ಮಿಲ್ಸ್‌ ಕಾಂಪೌಂಡ್‌ನಲ್ಲಿ ಗುರುವಾರ ತಡರಾತ್ರಿ ಅಗ್ನಿ ದುರಂತ ಸಂಭವಿಸಿದೆ. ಈ ಅವಗಢದಲ್ಲಿ 12 ಮಂದಿ ಮಹಿಳೆಯರು ಸೇರಿದಂತೆ 14 ಮಂದಿ ಸಾವಿಗೀಡಾಗಿದ್ದಾರೆ. ಇನ್ನು 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಸಾವಿಗೀಡಾದ ಮಹಿಳೆಯರು ರೆಸ್ಟೋರೆಂಟ್‌ ಒಂದರಲ್ಲಿ ಸ್ನೇಹಿತೆಯ ಹುಟ್ಟು ಹಬ್ಬದ ಪಾರ್ಟಿಗಾಗಿ ಆಗಮಿಸಿದ್ದರು. ಈ ವೇಳೆ ಗುರುವಾರ ತಡರಾತ್ರಿ 12.30ಕ್ಕೆ ಮೂರು ಮತ್ತು ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಇಡೀ ಕಟ್ಟಡವನ್ನು ಆವರಿಸಿದೆ. ಈ ವೇಳೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ 28 ವರ್ಷದ ಯುವತಿ ಸೇರಿದಂತೆ 14 ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕೂಡಲೆ ಸುಮಾರು 6ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ, ಟ್ಯಾಂಕರ್‌ಗಳು ಹಾಗೂ ಆ್ಯಂಬುಲೆನ್ಸ್‌ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ. ಇನ್ನು ದುರಂತದಲ್ಲಿ ಸಿಲುಕಿಕೊಂಡಿದ್ದ ಅನೇಕ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಸಿಯಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

 

Leave a Reply

Your email address will not be published.

Social Media Auto Publish Powered By : XYZScripts.com