ಕಿಚ್ಚ ಸುದೀಪ್ ರಾಜಕೀಯ ಎಂಟ್ರಿ ಕುರಿತು H.D ದೇವೇಗೌಡ ಹೇಳಿದ್ದೇನು……?
ಬೆಂಗಳೂರು : ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದು ಜೆಡಿಎಸ್ಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂಬ ವಿಚಾರ ಕುರಿತಂತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.
ಕುಮಾರಸ್ವಾಮಿ ಅವರು ಸುದೀಪ್ ಅವರ ಜೊತೆ ಮಾತುಕತೆ ನಡೆಸಿರುವುದು ನಿಜ. ಆದರೆ ಏನು ಮಾತಾಡಿದ್ದಾರೆ. ಇದಕ್ಕೆ ಸುದೀಪ್ ಅವರ ನಿರ್ಧಾರವೇನು ಎಂಬುದು ನನಗೆ ತಿಳಿದಿಲ್ಲ ಎಂದಿದ್ದಾರೆ.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರ ವ್ಯಕ್ತಿತ್ವವನ್ನೂ ಹಗುರವಾಗಿ ಕಾಣುವ ವ್ಯಕ್ತಿಯಲ್ಲ. ಸುದೀಪ್ ಅವರೊಂದಿಗೆ ಕುಮಾರಸ್ವಾಮಿ ಮಾತನಾಡಿರುವುದು ಸತ್ಯ. ಆದರೆ ಅವರ ನಿರ್ಧಾರ ಏನೆಂಬುದು ನನಗೆ ಗೊತ್ತಿಲ್ಲ ಎಂದಿದ್ದಾರೆ.
ಮಾಜಿ ಸಂಸದೆ ರಮ್ಯಾ ಅವರು ಸುದೀಪ್ ಅವರಿಗೆ ಕಾಂಗ್ರೆಸ್ಗೆ ಸೇರ್ಪಡೆಯಾಗುವಂತೆ ಕೇಳಿಕೊಂಡಿದ್ದಾರೆ. ಆದ್ದರಿಂದ ಕಿಚ್ಚ ಕಾಂಗ್ರೆಸ್ನಿಂದ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಹರಡುತ್ತಿವೆ. ಆದರೆ ಇದರ ಬಗ್ಗೆ ಸುದೀಪ್ ನಿರ್ಧಾರವೇನು ಎಂಬುದು ಮಾತ್ರ ಇನ್ನೂ ಬಹಿರಂಗವಾಗಿಲ್ಲ.