Ashes Cricket : ಸ್ಟೀವ್ ಸ್ಮಿತ್ ಶತಕ : ಬಾಕ್ಸಿಂಗ್ ಡೇ ಟೆಸ್ಟ್ ಡ್ರಾನಲ್ಲಿ ಅಂತ್ಯ

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಶನಿವಾರ ನಡೆದ 5ನೇ ದಿನದಾಟದಲ್ಲಿ ಆತಿಥೇಯ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಕಳೆದುಕೊಂಡು 263 ರನ್ ಗಳಿಸಿತು.

ಅಜೇಯ ಶತಕ ಬಾರಿಸಿದ ನಾಯಕ ಸ್ಟೀವ್ ಸ್ಮಿತ್ 102 ರನ್ ಗಳಿಸಿದರು. ಆರಂಭಿಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ 86 ರನ್ ಗಳಿಸಿ ಔಟಾದರು. ಇಂಗ್ಲೆಂಡ್ ಪರವಾಗಿ ಜೇಮ್ಸ್ ಆ್ಯಂಡರ್ಸನ್, ಸ್ಟುವರ್ಟ್ ಬ್ರಾಡ್, ಕ್ರಿಸ್ ವೋಕ್ಸ್ ಹಾಗೂ ಜೋ ರೂಟ್ ತಲಾ 1 ವಿಕೆಟ್ ಪಡೆದರು.

ದ್ವಿಶತಕ ಬಾರಿಸಿದ ಅಲಿಸ್ಟರ್ ಕುಕ್ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರು. 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ ಈಗಾಗಲೇ 3-0 ಯಿಂದ ಸರಣಿಯನ್ನು ತನ್ನದಾಗಿಸಿಕೊಂಡಿದೆ. ನಾಲ್ಕನೇ ಟೆಸ್ಟ್ ಪಂದ್ಯ ‘ಡ್ರಾ’ ಆಗಿರುವುದರಿಂದ ಪ್ರವಾಸಿ ಇಂಗ್ಲೆಂಡ್ ತಂಡ ವೈಟ್ ವಾಷ್ ತಪ್ಪಿಸಿಕೊಂಡಂತಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com