ಪುತ್ರ ಪ್ರೇಯಸಿ ಜೊತೆ ಓಡಿಹೋದದ್ದಕ್ಕೆ ತಾಯಿಗೆ ಇಂಥಾ ಶಿಕ್ಷೆ ನೀಡೋದಾ…?

ಲಖನೌ : ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪುತ್ರನೊಬ್ಬ ಪ್ರೇಯಸಿಯೊಂದಿಗೆ ಪರಾರಿಯಾಗಿದ್ದು, ಆತನ ತಾಯಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಶಾಮ್ಲಿ ಜಿಲ್ಲೆಯ ನೋಜಲ್‌ ಗ್ರಾಮದಲ್ಲಿ ಘಟನೆ ನಡೆದಿರುವುದಾಗಿ ಮೂಲಗಳು ವರದಿ ಮಾಡಿವೆ. ನೋಜಲ್‌ ಗ್ರಾಮದ 26 ವರ್ಷದ ಯುವಕನೊಬ್ಬ ಮುಜಫ್ಫರ್‌ನಗರದ ಯುವತಿಯನ್ನು ಪ್ರೀತಿಸುತ್ತಿದ್ದ. ಇವರ ಪ್ರೀತಿಗೆ ಮನೆಯವರ ಒಪ್ಪಿಗೆ ಇರದ ಕಾರಣ ಇಬ್ಬರೂ ಮನೆ ಬಿಟ್ಟು ಓಡಿಹೋಗಿದ್ದರು.

ಇದರಿಂದ ಸಿಟ್ಟಿಗೆದ್ದ ಯುವತಿಯ ಕುಟುಂಬಸ್ಥರು ಯುವಕನ ತಾಯಿ ಹಾಗೂ ಆತನ ಕುಟುಂಬಸ್ಥರನ್ನು ಅಪಹರಿಸಿ ಬಂಧನದಲ್ಲಿಟ್ಟಿದ್ದರು. ಬಳಿಕ ಯುವಕನ ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದು, ಯುವಕನ ತಾಯಿ ಹಾಗೂ ಕುಟುಂಬಸ್ಥರನ್ನು ಪಾರು ಮಾಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com