Blue Whale Game ? : ಮುಖಕ್ಕೆ ಪ್ಲಾಸ್ಟಿಕ್‌ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಹೈದರಾಬಾದ್‌ : ದೇಶದಲ್ಲಿ ಬ್ಲ್ಯೂ ವೇಲ್‌ ಸೂಸೈಡ್‌ ಗೇಮ್‌ ನಿಂದ ಸಾವಿಗೀಡಾಗುತ್ತಿರುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ನಿಟ್ಟುಸಿರು ಬಿಡುವ ಸಮಯದಲ್ಲೇ ಈ ಗೇಮ್‌ಗೆ ಮತ್ತೊಬ್ಬ ಬಾಲಕ ಬಲಿಯಾಗಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಹೈದರಾಬಾದ್‌ನ 19 ವರ್ಷದ ಬಾಲಕ ವರುಣ್‌ ಎಂಬಾತ ಗೇಮ್‌ನ ಚಟಕ್ಕೆ ಬಿದ್ದು, ತನ್ನ ಮುಖವನ್ನು ಪ್ಲಾಸ್ಟಿಕ್‌ ಕವರ್‌ನಿಂದ ಮುಚ್ಚಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ವರುಣ್ ತಂದೆ ವರುಣ್‌ ಆತ್ಮಹತ್ಯೆ ಮಾಡಿಕೊಂಡಿದ್ದರ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು.  ಆತ ಎಲ್ಲರೊಂದಗೆ ಚೆನ್ನಾಗ ಮಾತನಾಡಿಕೊಂಡು ಆರಾಮಾಗಿದ್ದ ಎಂದು ಸ್ನೇಹಿತರು ಹೇಳಿದ್ದು, ಈಗ ಆತನ ಸಾವಿನ ಬಗ್ಗೆ ಅನುಮಾನಗಳು ಹುಟ್ಟಿಕೊಳ್ಳತೊಡಗಿದೆ.

ವರುಣ್ ಬ್ಲ್ಯೂವೇಲ್‌ ಗೇಮ್‌ಗೆ ಬಲಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆತನ ಲ್ಯಾಪ್‌ಟಾಪನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

 

 

Leave a Reply

Your email address will not be published.

Social Media Auto Publish Powered By : XYZScripts.com