ಹೊಸ ವರ್ಷದ ದಿನವೇ CM ಗೆ ಶಾಕ್‌ : ಸಂಕಷ್ಟದಲ್ಲಿ ಸಿಲುಕಿದ ಸಿದ್ದರಾಮಯ್ಯ

ಬೆಂಗಳೂರು : ಹೊಸ ವರ್ಷದ ಮೊದಲ ದಿನವೇ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ನಾಲ್ಕು ವರ್ಷಗಳಲ್ಲಿ ಸರ್ಕಾರದ ಸಾಧನೆಗಳ ಪ್ರಚಾರಕ್ಕೆಂದು ಸುಮಾರು 129 ಕೋಟಿ ರೂ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿರುವುದಾಗಿ ಬೆಂಗಳೂರು ನಾಗರಿಕ ಹಕ್ಕು ಹೋರಾಟ ಸಮಿತಿ, ಎಸಿಬಿಗೆ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ತಮ್ಮ ನಾಲ್ಕು ವರ್ಷದ ಆಡಳಿತಾವಧಿಯಲ್ಲಿ ತಮ್ಮ ಹಾಗೂ ಸರ್ಕಾರದ ಪ್ರಚಾರಕ್ಕೆಂದು 129 ಕೋಟಿ ರೂ ಹಣವನ್ನು ದುರ್ಬಳಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರನ್ನು ತನಿಖೆಗೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕ ಹಕ್ಕು ಹೋರಾಟ ಸಮಿತಿ ಎಸಿಬಿಗೆ ದೂರಿದೆ. ಜೊತೆಗೆ ಇದಕ್ಕೆ ಸಹಕಾರ ನೀಡಿದ ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿರುದ್ಧವೂ ತನಿಖೆ ನಡೆಸುವಂತೆ ಮನವಿ ಮಾಡಿದೆ.

Leave a Reply

Your email address will not be published.