ರಾಜ್ಯ BJP ವಕ್ತಾರ ಸ್ಥಾನದಿಂದ ಗೋ ಮಧುಸೂದನ್ ಕಿಕ್‌ ಔಟ್‌ ?

ಬೆಂಗಳೂರು : ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕದಲ್ಲಿ ಬಿಜೆಪಿ ಗೆಲುವು ಸಾಧಿಸಲು ಶತಾಯಗತಾಯ ಪ್ರಯತ್ನಿಸುತ್ತಿದೆ. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ವಿರುದ್ದ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮುಖಂಡ ಗೋ ಮಧುಸೂದನ್‌ ಅವರನ್ನ ರಾಜ್ಯ ಬಿಜೆಪಿ ವಕ್ತಾರ ಸ್ಥಾನದಿಂದ ವಜಾಗೊಳಿಸಿರುವುಗಾಗಿ ಮಾಧ್ಯಮಗಳು ವರದಿ ಮಾಡಿವೆ.

ಈ ಹಿಂದೆ ರಾಯಣ್ಣ ಬ್ರಿಗೇಡ್‌ ವಿಚಾರದಲ್ಲಿಯೂ ಗೋ ಮಧುಸೂದನ್‌ ವಕ್ತಾರ ಹುದ್ದೆಯಿಂದ ವಜಾಗೊಂಡಿದ್ದರು. ಸೋಮವಾರ ಪ್ರಕಾಶ್‌ ಜಾವ್ಡೇಕರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೋ ಮಧುಸೂದನ್‌ ಅವರಿಗೆ 2 ಗಂಟೆಗಳ ಕಾಲ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಜೊತೆಗೆ ಇನ್ನು ಯಾವುದೇ ಮಾಧ್ಯಮಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಗೋಮಧುಸೂದನ್‌ ಅವರಿಗೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com